ನಿಮ್ಮ ಎಲ್ಲಾ ನಿರೀಕ್ಷೆಗಳನ್ನು ಕೆಜಿಎಫ್-2 ಈಡೇರಿಸುತ್ತೆ: ಯಶ್ ಭರವಸೆ
ರಾಕಿಂಗ್ ಸ್ಟಾರ್ ಯಶ್ ಅಭಿನಯಿಸಿ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾ ಬಗ್ಗೆ ಅವರ ಅಭಿಮಾನಿಗಳ ನಿರೀಕ್ಷೆ ಭಾರೀ ಪ್ರಮಾಣದಲ್ಲಿದ್ದು, ಅದರ ಬಗ್ಗೆ ತಮಗೆ ಅರಿವಿದೆ ಎಂದು ಯಶ್ ತಿಳಿಸಿದ್ದಾರೆ.
ತಮ್ಮ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಯಶ್, ಕೆಜಿಎಫ್-2 ಸಿನಿಮಾ ಪ್ರೇಕ್ಷಕರ ಎಲ್ಲಾ ನಿರೀಕ್ಷೆಗಳನ್ನು ಪೂರೈಸುತ್ತದೆ ಎಂದು ಹೇಳಿದ್ದಾರೆ. ಇದು ಅತಿಯಾದ ಆತ್ಮವಿಶ್ವಾಸ ಎಂದುಕೊಳ್ಳಬೇಡಿ, ಏಕೆಂದರೇ ಇಡೀ ಚಿತ್ರತಂಡ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
ಸದ್ಯ ನಾನು ಶೂಟಿಂಗ್ ಎಂಜಾಯ್ ಮಾಡುತ್ತಿದ್ದೇನೆ, ಕಡಪದಲ್ಲಿ ಹಲವು ದಿನಗಳ ಶೂಟಿಂಗ್ ಮುಗಿಸಿ ಹುಟ್ಟು ಹಬ್ಬ ಆಚರಣೆಗಾಗಿ ಬೆಂಗಳೂರಿಗೆ ಆಗಮಿಸಿರುವುದಾಗಿ ಹೇಳಿದ್ದಾರೆ.
ಕೆಜಿಎಫ್ ಮುಗಿದ ನಂತರ ಕೇವಲ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಮಾತ್ರ ಒಪ್ಪಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಯಶ್, ಅದು ಪ್ರತಿ ಸಿನಿಮಾ ಮೇಲೆ ಅವಲಂಬಿತವಾಗಿರುತ್ತದೆ. ಆ ಕಥೆ ಅದಕ್ಕೆ ಒಪ್ಪುತ್ತದೆ ಎಂದಾದರೇ ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ನನಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ, ಪ್ರತಿಯೊಬ್ಬರು ನನ್ನ ಸಿನಿಮಾಗಾಗಿ ಕಾಯುತ್ತಿದ್ದಾರೆ, ಹೀಗಾಗಿ ಏಕೆ 5 ಭಾಷೆಗಳಲ್ಲಿ ಸಿನಿಮಾ ಮಾಡಬಾರದು ಎಂಬ ಪ್ರಶ್ನೆ ಮೂಡಿತು. ಏಕೆಂದರೇ ಅಭಿಮಾನಿಗಳನ್ನು ರಂಜಿಸುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ