ರವಿಚಂದ್ರ ತಂಡ ಸೇರಿದ ಅದಿತಿ ಆರ್ಯ

ಭಾರೀ ನಿರೀಕ್ಷೆ ಹುಟ್ಟುಹಾಕಿರುವ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ಒಟ್ಟಿಗೆ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನಟಿ ಅದಿತಿ ಆರ್ಯ ಅವರೂ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. 
ಅದಿತಿ ಆರ್ಯ
ಅದಿತಿ ಆರ್ಯ
Updated on: 

ಭಾರೀ ನಿರೀಕ್ಷೆ ಹುಟ್ಟುಹಾಕಿರುವ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ಒಟ್ಟಿಗೆ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನಟಿ ಅದಿತಿ ಆರ್ಯ ಅವರೂ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. 

ಉಪೇಂದ್ರ ಅವರು ಈಗಾಗಲೇ ಮೂರು ಚಿತ್ರಗಳಲ್ಲಿ ಬಿಝಿಯಾಗಿದ್ದು, ಚಿತ್ರಗಳ ಚಿತ್ರೀಕರಣಗಳಿಗೆ ತಮ್ಮ ಸಮಯವನ್ನು ಸಂಪೂರ್ಣವಾಗಿ ಮೀಸಲಿಟ್ಟಿದ್ದಾರೆ. 

ರವಿಚಂದ್ರನ್ ಹಾಗೂ ಉಪೇಂದ್ರ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಚಿತ್ರ ತೆಲುಗಿನ ಬಲಪು ಚಿತ್ರದಿಂದ ಪ್ರೇರಣೆಗೊಂಡು ಮೂಡಿಬರುತ್ತಿದೆ. 

ಇದೊಂದು ಕಮರ್ಷಿಯಲ್ ಚಿತ್ರವಾಗಿದ್ದು, ಚಿತ್ರದಲ್ಲಿ ಈಗಾಗಲೇ ಶಾನ್ವಿ ಶ್ರೀವಾತ್ಸವ್ ಹಾಗೂ ನಿಮಿಕಾ ರತ್ನಾಕರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ತಂಡಕ್ಕೆ ಅದಿತಿ ಕೂಡ ಸೇರ್ಪಡೆಗೊಂಡಿದ್ದಾರೆ. 

ಈ ಹಿಂದೆ ಮುನಿರತ್ನ ನಿರ್ದೇಶನದ ಕುರುಕ್ಷೇತ್ರ ಚಿತ್ರದಲ್ಲಿ ಅದಿತಿ ಉತ್ತರೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಎರಡನೇ ಚಿತ್ರದಲ್ಲಿ ರವಿಚಂದ್ರನ್ ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ. 

ಚಿತ್ರವನ್ನು ರವಿವರ್ಮಾ ಅವರು ನಿರ್ದೇಶಿಸುತ್ತಿದ್ದು, ಅರ್ಜುನ್ ಜನ್ಯ ಅವರು ಸಂಗೀತ ನೀಡುತ್ತಿದ್ದಾರೆ. ಪ್ರಸ್ತುತ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಸಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com