ದೇವೇಗೌಡರ ಕುಟುಂಬದ ಚಂಡಿಕಾಯಾಗ: ಶೃಂಗೇರಿಯಲ್ಲಿ ರಚಿತಾ ರಾಮ್; ಮದುವೆ ಬಗ್ಗೆ ರಚಿತಾ ಸ್ಪಷ್ಟನೆ!

‘ಸೀತಾರಾಮ ಕಲ್ಯಾಣ’ದ ನಾಯಕ ನಿಖಿಲ್ ಕುಮಾರಸ್ವಾಮಿಯ ಜೊತೆ ಕುಚ್ ಕುಚ್ ನಡೆಯುತ್ತಿದೆ.  ರಚಿತಾಗೆ ಮದುವೆ ನಿಶ್ಚಯವಾಗಿದೆ ಎಂಬ ಗುಸುಗುಸು, ಪಿಸುಪಿಸು ಸುದ್ದಿ, ಸತತ ಹದಿನೈದು ದಿನಗಳಿಂದ ವೈರಲ್ ಆಗುತ್ತಿದೆ.
ನಿಖಿಲ್ ಮತ್ತು ರಚಿತಾ ರಾಮ್
ನಿಖಿಲ್ ಮತ್ತು ರಚಿತಾ ರಾಮ್
Updated on: 

ಬೆಂಗಳೂರು:  ಸ್ಯಾಂಡಲ್‍ವುಡ್‍ ನ ಗುಳಿಕೆನ್ನೆ ಚೆಲುವೆ ರಚಿತಾರಾಮ್ ಬಗ್ಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಿಲ್ಲೊಂದು ಸುದ್ದಿ ಹರಿದಾಡುತ್ತಿದೆ

‘ಸೀತಾರಾಮ ಕಲ್ಯಾಣ’ದ ನಾಯಕ ನಿಖಿಲ್ ಕುಮಾರಸ್ವಾಮಿಯ ಜೊತೆ ಕುಚ್ ಕುಚ್ ನಡೆಯುತ್ತಿದೆ.  ರಚಿತಾಗೆ ಮದುವೆ ನಿಶ್ಚಯವಾಗಿದೆ ಎಂಬ ಗುಸುಗುಸು, ಪಿಸುಪಿಸು ಸುದ್ದಿ, ಸತತ ಹದಿನೈದು ದಿನಗಳಿಂದ ವೈರಲ್ ಆಗುತ್ತಿದೆ.

ಆದರೆ ಈ ಎಲ್ಲ ಊಹಾಪೋಹಗಳಿಗೆ ಸ್ವತಃ ನಟಿ ರಚಿತಾ ತೆರೆ ಎಳೆದಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಪೇಜ್ ಮೂಲಕ ಜನರಿಗೆ, ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಎಲ್ಲರಿಗೂ ನಮಸ್ಕಾರ ನಾನು ನಿಮ್ಮ ರಚಿತಾ ರಾಮ್, ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರೋ ವದಂತಿಗಳ ಬಗ್ಗೆ ಒಂದು ಸ್ಪಷ್ಟತೆ ಕೊಡಲು ಬಯಸುತ್ತೇನೆ. ನನ್ನ ಸಿನಿಮಾಗಳ ಕುರಿತಾದ ವಿಷಯಗಳಾಗಲಿ ಅಥವಾ ವೈಯಕ್ತಿಕ ವಿಷಯಗಳಾಗಲಿ ನನ್ನ ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಅದು ಸತ್ಯವೆಂದು ಪರಿಗಣಿಸಿ, ಮನರಂಜನೆಗಾಗಿ ಸುಳ್ಳು ವದಂತಿಗಳನ್ನು ಸೃಷ್ಟಿ ಮಾಡಿದರೆ ಖುಷಿಯುಂಟಾಗಬಹುದು, ಆದರೆ ಅದರಿಂದ ನನಗೆ ಹಾಗೂ ವದಂತಿಗಳಲ್ಲಿ ಸಿಲುಕಿದ ಸಂಬಂಧಪಟ್ಟ ವ್ಯಕ್ತಿಗಳಿಗೆ ಬೇಸರ ಉಂಟಾಗುತ್ತದೆ ಎಂಬ ವಿಷಯ ಅರ್ಥ ಮಾಡಿಕೊಂಡರೆ ಉತ್ತಮ.

ಅತಿ ಮುಖ್ಯವಾದ ಸಂಗತಿ ಏನೆಂದರೆ ಸದ್ಯಕ್ಕೆ ನನ್ನ ಮದುವೆ ನಿಶ್ಚಯ ಆಗಿಲ್ಲ. ನಾನು ಮದುವೆ ಆಗುವ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ತಿಳಿಸಿ ಎಲ್ಲರ ಸಮ್ಮುಖದಲ್ಲಿ ಗುರು ಹಿರಿಯರ ಆಶೀರ್ವಾದದೊಂದಿಗೆ ಆಗುತ್ತೇನೆ ಸುಳ್ಳು ವದಂತಿಗಳನ್ನು ನಂಬಿ ವೖಯಕ್ತಿಕ ವಿಚಾರಗಳ ಬಗ್ಗೆ ನಗೆಪಾಟಲು ಮಾಡಬೇಡಿ ಎಂದು ವಿನಮ್ರತೆಯಿಂದ ಕೇಳಿಕೊಳ್ಳುತ್ತಿದ್ದೇನೆ

ನಿಮ್ಮ 
ರಚಿತಾ ರಾಮ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com