ಜಗ್ಗೇಶ್
ಸಿನಿಮಾ ಸುದ್ದಿ
ನಗಿಸಿದ ದೇವರಿಗೆ ಸ್ಮಾರಕ ನಿರ್ಮಾಣ ಖಚಿತ: ನಟ ಜಗ್ಗೇಶ್
ಕನ್ನಡ ಚಿತ್ರರಂಗದ ಹಾಸ್ಯ ಚಕ್ರವರ್ತಿ ದಿವಂಗತ ನರಸಿಂಹರಾಜು ಅವರ ಸ್ಮಾರಕ ನಿರ್ಮಾಣ ಬಗ್ಗೆ ವಿಶೇಷ ಆಸಕ್ತಿ ವಹಿಸಿರುವುದಾಗಿ ನಟ ಜಗ್ಗೇಶ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ಚಕ್ರವರ್ತಿ ದಿವಂಗತ ನರಸಿಂಹರಾಜು ಅವರ ಸ್ಮಾರಕ ನಿರ್ಮಾಣ ಬಗ್ಗೆ ವಿಶೇಷ ಆಸಕ್ತಿ ವಹಿಸಿರುವುದಾಗಿ ನಟ ಜಗ್ಗೇಶ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ಅಭಿಮಾನಿಯೊಬ್ಬರು “ಕರ್ನಾಟಕದ ಜನರ ಹೃದಯ ಗೆದ್ದ ಹಾಸ್ಯ ನಟ ನರಸಿಂಹರಾಜು ಅವರ ಹೆಸರಲ್ಲಿ ಅವರ ನೆನಪು ಉಳಿಸಲು ತಿಪಟೂರಿನಲ್ಲಿ ಸ್ಮಾರಕ ಮಾಡಲಾಗುವುದು ಎಂದು ಕಾರ್ಯಕ್ರಮವೊಂದರಲ್ಲಿ ಅವರ ಶ್ರೀಮತಿಯವರಿಗೆ ಆಶ್ವಾಸನೆ ನೀಡಿದ್ದ ನೆನಪು, ಅದೇನಾದರೂ ಕಾರ್ಯಗತ ಆಗ್ತಿದೆಯಾ” ಎಂದು ಜಗ್ಗೇಶ್ ಅವರನ್ನು ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ.
ಇದಕ್ಕೆ ಉತ್ತರಿಸಿರುವ ಜಗ್ಗೇಶ್, “ಖಂಡಿತ... ನಾನು ಹಾಗೂ ನನ್ನ ಗೆಳೆಯ, ಶಾಸಕ ನಾಗೇಶ್ ರವರು ಆ ಕಾರ್ಯದ ಬಗ್ಗೆ ವಿಶೇಷ ಆಸಕ್ತಿವಹಿಸಿರುವೆವು… ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನರಸಿಂಹರಾಜುರವರ ಮಡದಿಗೆ ಕಳೆದವಾರ ನೀಡಿರುವೆ. ನಗಿಸಿದ ದೇವರಿಗೆ ಖಡಿತ ನೆನಪಿನ ಸ್ಮಾರಕ ನಿರ್ಮಾಣ ಆಗುತ್ತದೆ... ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ