'777 ಚಾರ್ಲಿ'ಯಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ಡ್ಯಾನಿಶ್ ಸೇಠ್!

ರಕ್ಷಿತ್ ಶೆಟ್ಟಿ ಅಭಿನಯದ ಮುಂಬರುವ ಚಿತ್ರ 777 ಚಾರ್ಲಿ ಸಾಕಷ್ಟು ಸುದ್ದಿ ಮಾಡುತ್ತಿದೆ. ಸಾಹಸ ಪ್ರಧಾನ ಕಾಮಿಡಿ ಚಿತ್ರವನ್ನು ಕಿರಣ್ ರಾಜ್ ನಿರ್ದೇಶಿಸುತ್ತಿದ್ದು ಇದರಲ್ಲಿ ಹಂಬಲ್ ಪೊಲಿಟಿಷಿಯನ್ ನೊಗರಾಜ್ ಖ್ಯಾತಿಯ ಡ್ಯಾನಿಶ್ ಸೇಠ್ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.
777 ಚಾರ್ಲಿ ಚಿತ್ರದ ದೃಶ್ಯ
777 ಚಾರ್ಲಿ ಚಿತ್ರದ ದೃಶ್ಯ
Updated on

ರಕ್ಷಿತ್ ಶೆಟ್ಟಿ ಅಭಿನಯದ ಮುಂಬರುವ ಚಿತ್ರ 777 ಚಾರ್ಲಿ ಸಾಕಷ್ಟು ಸುದ್ದಿ ಮಾಡುತ್ತಿದೆ. ಸಾಹಸ ಪ್ರಧಾನ ಕಾಮಿಡಿ ಚಿತ್ರವನ್ನು ಕಿರಣ್ ರಾಜ್ ನಿರ್ದೇಶಿಸುತ್ತಿದ್ದು ಇದರಲ್ಲಿ ಹಂಬಲ್ ಪೊಲಿಟಿಷಿಯನ್ ನೊಗರಾಜ್ ಖ್ಯಾತಿಯ ಡ್ಯಾನಿಶ್ ಸೇಠ್ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.

ಟಿವಿ ನಿರೂಪಕ ಮತ್ತು ಕಾಮಿಡಿಯನ್ ಆಗಿರುವ ಡ್ಯಾನಿಶ್ ಅವರ ಹುಟ್ಟುಹಬ್ಬದ ದಿನ ಅವರು ಮತ್ತು ರಕ್ಷಿತ್ ಶೆಟ್ಟಿ ಚಿತ್ರದಲ್ಲಿರುವ ದೃಶ್ಯವೊಂದನ್ನು ನಿರ್ದೇಶಕರು ಬಿಡುಗಡೆ ಮಾಡಿದ್ದಾರೆ. ನಮ್ಮ ಚಿತ್ರದಲ್ಲಿ ಡ್ಯಾನಿಶ್ ಕರ್ಶನ್ ರಾಯ್ ಪಾತ್ರ ಮಾಡುತ್ತಿದ್ದಾರೆ. ಅವರ ಭಾಗದ ಚಿತ್ರೀಕರಣ ಮುಗಿದಿದೆ, ಈ ಹಿಂದೆ ಕಾಣಿಸಿಕೊಳ್ಳದ ರೀತಿಯಲ್ಲಿ ಡ್ಯಾನಿಶ್ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ನಿರ್ದೇಶಕರು ಹೇಳುತ್ತಾರೆ.

ಡ್ಯಾನಿಶ್ ಕೂಡ 777 ಚಾರ್ಲಿ ಚಿತ್ರದ ಭಾಗವಾಗಿರುವುದಕ್ಕೆ ಖುಷಿಯಾಗಿದ್ದಾರೆ. ರಕ್ಷಿತ್ ಶೆಟ್ಟಿಯವರ ಜೊತೆ ಚಿತ್ರದಲ್ಲಿ ನಟಿಸಿದ್ದು ಖುಷಿ ನೀಡಿದೆ ಎಂದು ಡ್ಯಾನಿಸ್ ಸೇಠ್ ಹೇಳುತ್ತಾರೆ.

ಪುಷ್ಕರ್ ಫಿಲ್ಮ್ಸ್ ನಡಿ ತಯಾರಾಗುತ್ತಿರುವ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಮತ್ತು ಜಿಎಸ್ ಗುಪ್ತಾ ಕೂಡ ಬಂಡವಾಳ ಹಾಕಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರವನ್ನು ತೆರೆಗೆ ತರುವ ಯೋಜನೆಯಲ್ಲಿ ಚಿತ್ರತಂಡವಿದೆ.

ಈ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ, ಸಂಗೀತ ಶೃಂಗೇರಿ ನಟಿಸಿದ್ದಾರೆ. ನೊಬಿನ್ ಪೌಲ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com