ಸ್ಯಾಂಡಲ್ ವುಡ್ ಗೆ ಇನ್ಮುಂದೆ ಶಿವರಾಜ್ ಕುಮಾರ್ ನಾಯಕತ್ವ!

ಅಂಬರೀಷ್ ನಿಧನರಾಗಿ ಒಂದೂವರೆ ವರ್ಷದ ಬಳಿಕ ಹ್ಯಾಟ್ರಿಕ್ ಹಿರೋ  ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ನಾಯಕತ್ವ ವಹಿಸಿಕೊಂಡಿದ್ದಾರೆ.
ಶಿವರಾಜ್ ಕುಮಾರ್
ಶಿವರಾಜ್ ಕುಮಾರ್
Updated on

ಬೆಂಗಳೂರು:ರೆಬೆಲ್ ಸ್ಟಾರ್ ಅಂಬರೀಷ್ ನಿಧನದ ನಂತರ ಕನ್ನಡ ಚಿತ್ರೋದ್ಯಮದ ನಾಯಕತ್ವವನ್ನು ಯಾರು ವಹಿಸಿಕೊಳ್ಳಬೇಕೆಂಬ ಬಗ್ಗೆ  ಸಾಮಾಜಿಕ ಜಾಲತಾಣಗಳಲ್ಲಿ ಜೋರಾದ ಚರ್ಚೆ ನಡೆಯುತಿತ್ತು. ಕೆಲವರು ಶಿವರಾಜ್ ಕುಮಾರ್ ಅಂತಿದ್ದರೆ, ಮತ್ತೆ ಕೆಲವರು ರವಿಚಂದ್ರನ್, ದರ್ಶನ್, ಸುದೀಪ್, ಯಶ್ ಹೀಗೆ ತಮ್ಮ ತಮ್ಮ ನೆಚ್ಚಿನ ಹಿರೋಗಳ ಹೆಸರನ್ನು ಹೇಳುವ ಮೂಲಕ ಅವರೇ ಮುಂದಿನ ಸ್ಯಾಂಡಲ್ ವುಡ್ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದರು.

ಆದರೆ, ಇದಕೆಲ್ಲಾ ಇಂದು ಉತ್ತರ ಸಿಕ್ಕಿದ್ದು, ಅಂಬರೀಷ್ ನಿಧನರಾಗಿ ಒಂದೂವರೆ ವರ್ಷದ ಬಳಿಕ ಹ್ಯಾಟ್ರಿಕ್ ಹಿರೋ 
ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ನಾಯಕತ್ವ ವಹಿಸಿಕೊಂಡಿದ್ದಾರೆ.

ಕೋವಿಡ್ 19  ನಿಂದಾಗಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ವಿಷಯವಾಗಿ, ಎಲ್ಲ ವಿಭಾಗಗಳ ಪುನಶ್ಚೇತನದ ಬಗ್ಗೆ ಚರ್ಚಿಸಲು ಶುಕ್ರವಾರ ಮಧ್ಯಾಹ್ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ನಿವಾಸದಲ್ಲಿ ಸಭೆ  ನಡೆಸಲಾಯಿತು.

 ಕಲಾವಿದರ ಸಂಘ, ಚಲನಚಿತ್ರ ವಾಣಿಜ್ಯ  ಮಂಡಳಿ, ನಿರ್ಮಾಪಕರ ಸಂಘದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.ಕನ್ನಡ ಚಿತ್ರರಂಗದ ಸಂಕಷ್ಟಗಳನ್ನು ಸರ್ಕಾರದ ಮುಂದಿಡಲು, ಸಮಸ್ಯೆಗಳನ್ನು ಬಗೆಹರಿಸಲು ನಾಯಕತ್ವದ ಅಗತ್ಯವಿದ್ದು, ಶಿವರಾಜ್ ಕುಮಾರ್ ನಾಯಕತ್ವ ವಹಿಸಲು ಸಭೆ ಸಮ್ಮತಿಸಿತ್ತು.

ಕನ್ನಡ ಚಿತ್ರರಂಗದ ನಾಯಕತ್ವ ವಹಿಸಿಕೊಂಡ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿವರಾಜ್ ಕುಮಾರ್, ಇಡೀ ಜಗತ್ತು ಕೋವಿಡ್ 19 ಬಿಕ್ಕಟ್ಟಿನಿಂದ ಕೂಡಿರುವಾಗ  ಕನ್ನಡ ಚಿತ್ರರಂಗ ಕೂಡ ಅದಕ್ಕೆ ಹೊರತಾಗಿಲ್ಲ. ಇಂತಹ ಕಷ್ಟದ  ಪರಿಸ್ಥಿತಿಯಲ್ಲಿ ಚಿತ್ರರಂಗದ ಎಲ್ಲ  ವಿಭಾಗದವರೂ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ನಾಯಕತ್ವವನ್ನು ನಾನು ಒಪ್ಪಿಕೊಂಡಿದ್ದೇನೆ ಎಂದು  ಹೇಳಿದರು.

ಕಳೆದ ಐದು ತಿಂಗಳಿಂದ ಎಲ್ಲಾರು ಸಮಸ್ಯೆ ಸಿಲುಕಿಕೊಂಡಿದ್ದಾರೆ. ಎಲ್ಲಾ ಕಲಾವಿದರು ಜೊತೆಯಲ್ಲಿ ಹೋಗುತ್ತೇವೆ. ಎಲ್ಲರೂ, ಇಂಡಸ್ಟ್ರಿಯ ಬೆಳವಣಿಗೆಗೆ ಫೈಟ್ ಮಾಡುತ್ತೇವೆ  ಎಂದರು.

ಇನ್ನು ನನ್ನ ಮಾತಿಗೆ ಎಲ್ಲರೂ ಗೌರವ ನೀಡುತ್ತಾರೆಂದು ಭಾವಿಸುವೆ. ಮುಂದೆ ನಿಂತು ಸಮಸ್ಯೆಗಳನ್ನು ಎದುರಿಸಲು ಪ್ರಯತ್ನಿಸುವೆ. ಸಿನಿಮಾ ಇಂಡಸ್ಟ್ರಿ ಯಲ್ಲಿ ಎಲ್ಲರೂ ಒಂದೇ. ಅದಷ್ಟು ಬೇಗ ಸಿನಿಮಾ ಶೂಟಿಂಗ್ ಆರಂಭವಾಗುತ್ತೆ ಎಂದು ಹೇಳಿದರು.

ಸದ್ಯ ಕೊರೋನಾನಾ ದೊಡ್ಡ ವಿಚಾರ ಅಲ್ಲ, ಸರ್ಕಾರದ ಜೊತೆಗೆ ನಾವು ಹೋಗಬೇಕು. ಎಲ್ಲಾ ವಿಭಾಗಗಳಿಂದ ಒಗ್ಗಟ್ಟಾಗಿ ಬಂದಿರೋದು ಖುಷಿ ತಂದಿದೆ. ಇಂಡಸ್ಟ್ರಿಯ ಸಾಕಷ್ಟು ಸಮಸ್ಯೆಗಳನ್ನು ನನ್ನ ಜೊತೆ ಹಂಚಿಕೊಂಡಿದ್ದಾರೆ.ಸಾವಿರ ಜನರನ್ನು ಹಿಂದೆ ಇಟ್ಟುಕೊಂಡರಷ್ಟೇ ನಾಯಕ ಆಗಲ್ಲ.ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು.ಆಗಲೇ ನಾಯಕ ಆಗೋದು.ನನ್ನನ್ನು ಕಂಡರೆ ಎಲ್ಲರೂ ಇಷ್ಟಪಡ್ತಾರೆ.ಇನ್ಮುಂದೆ ನಾವೆಲ್ಲರೂ ಒಗ್ಗಟ್ಟಾಗಿ ಹೋಗೋಣ. ಮಾದರಿ  ಇಂಡಸ್ಟ್ರಿಯಾಗಿ ಬಾಳೋಣ ಎಂದು ನಟ ಶಿವರಾಜ್​ ಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com