

ನಿರ್ದೇಶಕ ಪ್ರೇಮ್ ಸದ್ಯ ಏಕ್ ಲವ್ ಯಾ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದಾದ ನಂತರ ಮತ್ತೊಂದು ಸಿನಿಮಾಗಾಗಿ ಪ್ಲಾನ್ ಮಾಡುತ್ತಿದ್ದಾರೆ.
ಮುಂಬರುವ ಅಕ್ಟೋಬರ್ ನಲ್ಲಿ ಶೂಟಿಂಗ್ ಆರಂಭಿಸುವ ಯೋಜನೆಯಿದೆ. ಮುಂದಿನ ಸಿನಿಮಾದ ಸ್ಕ್ರಿಪ್ಟ್ ಅಂತಿಮ ಹಂತದಲ್ಲಿದೆ, ಹೀಗಾಗಿ ಏಕ್ ಲವ್ ಯಾ ಆಡಿಯೋ ರಿಲೀಸ್ ವೇಳೆ ಅಥವಾ ವರಮಹಾಲಕ್ಷ್ಮಿ ಹಬ್ಬದ ವೇಳೆ ಸಿನಿಮಾ ಬಗ್ಗೆ ಪ್ರಕಟಿಸುವೆ ಎಂದು ಹೇಳಿದ್ದಾರೆ.
ತಮ್ಮ ಮುಂದಿನ ಸಿನಿಮಾ ಹೀರೋ ಯಾರು ಎಂಬ ಬಗ್ಗೆ ಪ್ರೇಮ್ ಎಲ್ಲಿಯೂ ತುಟಿ ಬಿಚ್ಚಿಲ್ಲ, ಅದನ್ನು ಪ್ರೇಕ್ಷಕರೇ ಗೆಸ್ ಮಾಡಲಿ ಎಂದು ಹೇಳಿದ್ದಾರೆ.
ಪ್ರೇಮ್ ಕೂಡ ನಟನೆಗಾಗಿ ಸಜ್ಜಾಗಿದ್ದಾರೆ. ಈ ಸಂಬಂಧ ಇನ್ನೂ ಕೆಲವು ನಿರ್ದೇಶಕರೊಂದಿಗೆ ಚರ್ಚಿಸುತ್ತಿದ್ದಾರೆ ಮತ್ತು ಸ್ಕ್ರಿಪ್ಟ್ ಅನ್ನು ಅಂತಿಮಗೊಳಿಸುತ್ತಿದ್ದಾರೆ.
ಈ ಮೊದಲು ಏಕ್ ಲವ್ ಯಾ ಸಿನಿಮಾ ಮೇ ತಿಂಗಳಲ್ಲಿ ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು, ಆದರೆ ಸದ್ಯ ರಿಲೀಸ್ ದಿನಾಂಕ ಮುಂದೂಡಲಾಗಿದೆ. ಈ ಸಿನಿಮಾದಲ್ಲಿ 8 ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.