ಬಾಕ್ಸರ್'ಗಾಗಿ ರಿಯಲ್ ಸ್ಟಾರ್ ಅತಿಥಿ ನಟ: ತೆಲುಗಿಗೆ ಉಪ್ಪಿ ರೀಎಂಟ್ರಿ
ಬೆಂಗಳೂರು: ಟೀಸರ್ ಮೂಲಕ ಈಗಾಗಲೇ ಅಭಿಮಾನಿಗಳ ಮನಗೆದ್ದಿರುವ ಬಾಕ್ಸರ್ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಕಾಣಿಸಿಕೊಳ್ಳುತ್ತಿದ್ದು, ಈ ಮೂಲಕ ತೆಲುಗು ಚಿತ್ರಕ್ಕೆ ರೀಎಂಟ್ರಿ ಕೊಡುತ್ತಿದ್ದಾರೆ.
ಟಾಲಿವುಡ್ ನಲ್ಲಿ ಈ ಹಿಂದೆ ಉಪೇಂದ್ರ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಅಲ್ಲು ಅರ್ಜುನ್ ನಟನೆಯ ಸನ್ ಆಪ್ ಸತ್ಯಮೂರ್ತಿ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಉಪೇಂದ್ರ ಅವರು ಬಳಿಕ ಯಾವುದೇ ತೆಲುಗು ಚಿತ್ರದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ವರುಣ್ ತೇಜ್ ಅಭಿನಯದ ಬಾಕ್ಸರ್ ಚಿತ್ರದಲ್ಲಿ ಉಪೇಂದ್ರ ಕಾಣಿಸಿಕೊಳ್ಳುತ್ತಿದ್ದಾರೆ.
ಈಗಾಗಲೇ ಕಬ್ಜ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಉಪೇಂದ್ರ ಅವರು, ತೆಲುಗು ಚಿತ್ರದರಂಗ ಹೊಸನಿರ್ದೇಶಕ ಕಿರಣ್ ಕೊರ್ರಪಟ್ಟಿ ಅವರ ಬಾಕ್ಸರ್ ಚಿತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಉಪೇಂದ್ರ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಬಾಕ್ಸರ್ ಚಿತ್ರ ವೊಂದು ಸ್ಫೋರ್ಟ್ಸ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ವರಣ್ ತೇಜ್ ನಾಯಕರಾಗಿದ್ದಾರೆ. ಚಿತ್ರದಲ್ಲಿ ವರುಣ್ ಅವರು ಕಿಕ್ ಬಾಕ್ಸರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಬಹುಮುಖ್ಯ ಪಾತ್ರದಲ್ಲಿ ಅತಿಥಿಯಾಗಿ ಉಪೇಂದ್ರ ಅವರು ಕಾಣಿಸಿಕೊಳ್ಳುತ್ತಿದ್ದಾರೆಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ