ಕಮ್ ಬ್ಯಾಕ್ ‘ರಶ್ಮಿಕಾ ಮಂದಣ್ಣ’ ಬಿಟ್ಟು ಹೋಗಬೇಡಿ ಎಂದು ಅಭಿಮಾನಿಗಳ ಮನವಿ!

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಅವರು ತಮ್ಮ ಟ್ವಿಟ್ಟರಿನಿಂದ ದೂರ ಉಳಿದಿದ್ದು, ಇದನ್ನು ಗಮನಿಸಿರುವ ಅಭಿಮಾನಿಗಳು ದಯವಿಟ್ಟು ಹಿಂದಿರುಗಿ ರಶ್ಮಿಕಾ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
Updated on: 

ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಅವರು ತಮ್ಮ ಟ್ವಿಟ್ಟರಿನಿಂದ ದೂರ ಉಳಿದಿದ್ದು, ಇದನ್ನು ಗಮನಿಸಿರುವ ಅಭಿಮಾನಿಗಳು ದಯವಿಟ್ಟು ಹಿಂದಿರುಗಿ ರಶ್ಮಿಕಾ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.

ರಶ್ಮಿಕಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ತಮ್ಮ ಮುಂಬರುವ ಚಿತ್ರಗಳ ಬಗ್ಗೆ ಹಂಚಿಕೊಳ್ಳುತ್ತಾರೆ. ಅಲ್ಲದೆ ಆಗಾಗ ತಮ್ಮ ಫೋಟೋಗಳನ್ನು ಸಹ ಟ್ವಿಟ್ಟರಿನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ರಶ್ಮಿಕಾ ತಮ್ಮ ಟ್ವಿಟ್ಟರಿನಿಂದ ದೂರ ಉಳಿದುಕೊಂಡಿದ್ದಾರೆ. ಇದರಿಂದ ಅವರ ಅಭಿಮಾನಿಗಳು ಬೇಸರಗೊಂಡಿದ್ದಾರೆ.

ತೆಲುಗಿನಲ್ಲಿ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡುತ್ತಿರುವ ರಶ್ಮಿಕಾ ಮಂದಣ್ಣ ಕನ್ನಡದ ಪೊಗರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇನ್ನು ತಮಿಳಿನ ಸುಲ್ತಾನ್ ಮತ್ತು ತೆಲುಗಿನ ಎಎ20 ಚಿತ್ರದಲ್ಲಿ ನಟಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com