ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ನಟ ಅಜಿತ್
ಸಿನಿಮಾ ಸುದ್ದಿ
ಕೊರೋನಾ ಭೀತಿ ನಡುವಲ್ಲೇ ಮಾಸ್ಕ್ ಧರಿಸಿ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ನಟ ಅಜಿತ್: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ
ಕೊರೋನಾ ಭೀತಿ ನಡುವಲ್ಲೇ ಕಾಲಿವುಡ್ ನಟ ಅಜಿತ್ ಹಾಗೂ ಅವರ ಪತ್ನಿ ಶಾಲಿನಿ ಇಬ್ಬರೂ ಮಾಸ್ಕ್ ಧರಿಸಿ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಚೆನ್ನೈ: ಕೊರೋನಾ ಭೀತಿ ನಡುವಲ್ಲೇ ಕಾಲಿವುಡ್ ನಟ ಅಜಿತ್ ಹಾಗೂ ಅವರ ಪತ್ನಿ ಶಾಲಿನಿ ಇಬ್ಬರೂ ಮಾಸ್ಕ್ ಧರಿಸಿ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ನೀಲಿ ಬಣ್ಣದ ಶರ್ಟ್ ಧರಿಸಿದ್ದ ಅಜಿತ್ ಅವರು ಪತ್ನಿ ಶಾಲಿನಿ ಜೊತೆಗೆ ಆಸ್ಪತ್ರೆಯಲ್ಲಿ ಓಡಾಡುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಕಂಡು ಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಅಜಿತ್ ಅವರು ಆಸ್ಪತ್ರೆಗೆ ಯಾವ ಕಾರಣಕ್ಕೆ ಭೇಟಿ ನೀಡಿದ್ದರು ಎಂಬುದು ತಿಳಿದುಬಂದಿಲ್ಲ. ಆದರೆ, ಅಜಿತ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

