'ಕನ್ನಡಿಗ'ನಾದ ಕ್ರೇಜಿಸ್ಟಾರ್: ಗುಣಭದ್ರನ ಅವತಾರದಲ್ಲಿ ರವಿಚಂದ್ರನ್ ಹೊಸ ಲುಕ್!
ಜಟ್ಟ, ಮೈತ್ರಿ, ಅಮರಾವತಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಟ್ಟಿರುವ ನಿರ್ಮಾಪಕ ಎನ್.ಎಸ್ ರಾಜ್ ಕುಮಾರ್,ನಿರ್ದೇಶಕ ಬಿ.ಎಂ. ಗಿರಿರಾಜ್ ಜೋಡಿ ” ಕನ್ನಡಿಗ” ನ ಮೂಲಕ ಮತ್ತೆ ಜೊತೆಯಾಗಿದೆ.
ಕನ್ನಡ ನಾಡಿನ ಇತಿಹಾಸವನ್ನು ದಾಖಲಿಸುವಲ್ಲಿ ಲಿಪಿಕಾರರ ವಂಶದ ಕೊಡುಗೆ ಅಪಾರ. ಈ ಚಿತ್ರದಲ್ಲಿ ರವಿಚಂದ್ರನ್ ಲಿಪಿಕಾರ ಗುಣಭದ್ರನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಣಿ ಚಿನ್ನಬೈರಾದೇವಿ ಪಾತ್ರದಲ್ಲಿ ಸುಮಲತಾ ಅಂಬರೀಶ್ ಕಾಣಿಸಿಕೊಳ್ಳಲಿದ್ದಾರೆ. ಕಿಟ್ಟಲ್ ಪಾತ್ರದಲ್ಲಿ ಜೆಮಿ ವಾಲ್ಟರ್ ಕಾಣಿಸಿಕೊಳ್ಳಲಿದ್ದಾರೆ.
ಕಮರೀಲ ಭಟ್ಟನಾಗಿ ಚಿ. ಗುರುದತ್, ಮಠದ ಸ್ವಾಮಿಯ ಪಾತ್ರದಲ್ಲಿ ದತ್ತಣ್ಣ, ಮಲ್ಲಿನಾಥನಾಗಿ ಬಾಲಾಜಿ ಮನೋಹರ್ ಮತ್ತು ಅಚ್ಯುತ್ ಕುಮಾರ್ ಹರಿಗೋಪಾಲನ ಪಾತ್ರ ನಿರ್ವಹಿಸುತ್ತಿದ್ದಾರೆ. ರಾಣಿ ಚಿನ್ನಬೈರಾದೇವಿ ಪಾತ್ರದಲ್ಲಿ ನಟಿ ಸುಮಲತಾ ಅಂಬರೀಶ್ ಕಾಣಿಸಿಕೊಳ್ಳಲಿದ್ದಾರೆ
ಚಿತ್ರದಲ್ಲಿ ಗಟ್ಟಿಗಿತ್ತಿಯ ಪಾತ್ರ. ಗಿರಿರಾಜ್ ಅವರು ನನಗಾಗಿ ಚಿತ್ರದಲ್ಲೂ ಪಾತ್ರ ಸೃಷ್ಟಿಸಿರುವುದು ಸಂತಸ ತಂದಿದೆ ಎಂದರು ನಟಿ ಪಾವನಾ . ಚಿತ್ರದಲ್ಲಿ ಸ್ವಾತಿ ಚಂದ್ರಶೇಖರ್, ಜೆಮಿ ವಾಲ್ಟರ್, ಚಿ. ಗುರುದತ್,ಬಾಲಾಜಿ ಮನೋಹರ್, ದತ್ತಣ್ಣ ಮತ್ತು ಅಚ್ಯುತ್ ಕುಮಾರ್ ಮತ್ತಿತರು ನಿರ್ವಹಿಸುತ್ತಿದ್ದಾರೆ.
ನೂರೈವತ್ತು ವರ್ಷಕ್ಕೂ ಹಿಂದಿನ ಕಥೆ ʻಕನ್ನಡಿಗʼನದ್ದಾಗಿದ್ದು, ಪಾತ್ರಗಳ ಜೊತೆಗೆ ಅಂದಿನ ಪರಿಸರ, ಕಟ್ಟಡಗಳನ್ನು ಮರುಸೃಷ್ಟಿ ಮಾಡುವುದು ನಿಜಕ್ಕೂ ಸವಾಲಿನ ಸಂಗತಿಯಾಗಿದೆ. ಹೀಗಾಗಿ ಕಲಾ ನಿರ್ದೇಶಕ ಹೊಸ್ಮನೆ ಮೂರ್ತಿ ಮತ್ತು ಚಿತ್ರತಂಡ ಇತಿಹಾಸಕಾರರನ್ನು ಸಂಪರ್ಕಿಸಿ, ಹಲವು ಕೃತಿಗಳನ್ನು ಪಾರಾಮರ್ಶಿಸಿ ಸೆಟ್ ರೂಪಿಸುತ್ತಿದ್ದಾರೆ.
ಚಿಕ್ಕಮಗಳೂರಿನ ಸುತ್ತಮುತ್ತಲಿನ ಕೆಲವು ಪ್ರದೇಶಗಳನ್ನು ಹಾಗೆಯೇ ಬಳಸಿಕೊಳ್ಳಲಾಗುತ್ತಿದೆ. ನವೆಂಬರ್‌ನಲ್ಲಿ 30 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸುವುದು ಚಿತ್ರತಂಡದ ಸದ್ಯದ ಯೋಜನೆಯಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ