ಸಿನಿಮಾ ಸುದ್ದಿ
ಅಗಲಿದ ಪತಿಯ ನೆನಪಲ್ಲೇ ಸೀಮಂತ ಶಾಸ್ತ್ರ ಮಾಡಿಸಿಕೊಂಡ ಮೇಘನಾ ರಾಜ್
ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ದಿವಂಗತ ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಪತಿಯ ಅಗಲಿಕೆ ನೋವಿನ ನಡುವೆಯೇ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದಾರೆ.
ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ದಿವಂಗತ ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಪತಿಯ ಅಗಲಿಕೆ ನೋವಿನ ನಡುವೆಯೇ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದಾರೆ.
ಪತಿ ಚಿರಂಜೀವಿಯ ಅಗಲಿಕೆ ನೋವಿರುವ ಕಾರಣ ಸೀಮಂತ ಕಾರ್ಯಕ್ರಮ ಅತ್ಯಂತ ಸರಳವಾಗಿ ಮತ್ತು ಖಾಸಗಿಯಾಗಿ ನಡೆದಿದೆ.
ಚಿರು ದೊಡ್ಡ ಕಟೌಟ್ ಇಟ್ಟು ಮೇಘನಾ ತಾವು ಅದರ ಸಮ್ಮುಖದಲ್ಲೇ ಸೀಮಂತ ಶಾಸ್ತ್ರ ಮುಗಿಸಿದ್ದಾರೆ. ಕಾರ್ಯಕ್ರಮದಲ್ಲಿ ಕೇವಲ ಕುಟುಂಬಸ್ಥರು ಹಾಗೂ ಕೆಲವೇ ಆಪ್ತರು ಭಾಗವಹಿಸಿದ್ದರು.
ಇನ್ನು ಮೇಘನಾ ಇತ್ತೀಚೆಗೆ ಸೃಜನ್ ಲೋಕೇಶ್ ಜೊತೆ "ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ" ಚಿತ್ರದಲ್ಲಿ ಅಭಿನಯಿಸಿದ್ದು ಚಿತ್ರವು ಬಿಡುಗಡೆಗೆ ಸಿದ್ದವಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ