ತರುಣ್ ಸುಧೀರ್ ಜನ್ಮದಿನಕ್ಕೆ 'ರಾಬರ್ಟ್’ ಹೊಸ ಪೋಸ್ಟರ್ ಬಿಡುಗಡೆ

ಡಿ ಬಾಸ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ ತಿಂಗಳಲ್ಲಿ ರಾಬರ್ಟ್ ಬಿಡುಗಡೆಯಾಗಬೇಕಿತ್ತು. ಆದ್ರೆ, ಲಾಕ್‌ಡೌನ್ ಆದ ಕಾರಣ ಆಗಲಿಲ್ಲ.
ರಾಬರ್ಟ್
ರಾಬರ್ಟ್
Updated on: 

ಡಿ ಬಾಸ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ ತಿಂಗಳಲ್ಲಿ ರಾಬರ್ಟ್ ಬಿಡುಗಡೆಯಾಗಬೇಕಿತ್ತು. ಆದ್ರೆ, ಲಾಕ್‌ಡೌನ್ ಆದ ಕಾರಣ ಆಗಲಿಲ್ಲ.

ಈಗಾಗಲೇ ಹಾಡುಗಳ ಮೂಲಕ ಬಹಳ ಹೈಪ್ ಕ್ರಿಯೇಟ್ ಮಾಡಿರುವ ರಾಬರ್ಟ್ ಅಕ್ಟೋಬರ್ 9ಕ್ಕೆ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ.

ಈ ಪೋಸ್ಟರ್ ಅನ್ನು ನಿರ್ಮಾಪಕ, ನಿರ್ದೇಶಕ ತರುಣ್ ಸುಧೀರ್ ಅವರ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆ ಮಾಡಲಾಗಿದ್ದು ನಟ ದರ್ಶನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತರುಣ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

"A Brother from another Mother ತರುಣನಿಗೆ ನಮ್ಮ ರಾಬರ್ಟ್ ತಂಡದಿಂದ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನೆ." ಎಂದು ದರ್ಶನ್ ಟ್ವೀಟ್ ಮಾಡಿದ್ದು ಜತೆಗೆ "ರಾಬರ್ಟ್" ಚಿತ್ರದ ಹೊಸ ಪೋಸ್ಟರ್ ಸಹ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com