ಆ್ಯಡಂ ಪಾಷಾ
ಆ್ಯಡಂ ಪಾಷಾ

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಎನ್ಸಿಬಿಯಿಂದ ಬಿಗ್ ಬಾಸ್ ಮಾಜಿ ಸ್ಪರ್ಧಿ ಆ್ಯಡಂ ಪಾಷಾ ಬಂಧನ

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬಳಿಕ ಎನ್ ಸಿಬಿ ಅಧಿಕಾರಿಗಳು ಬಿಗ್ ಬಾಸ್ ಮಾಜಿ ಸ್ಪರ್ಧಿ ಆ್ಯಡಂ ಪಾಷಾರನ್ನು ಬಂಧಿಸಿದ್ದಾರೆ. 
Published on

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬಳಿಕ ಎನ್ ಸಿಬಿ ಅಧಿಕಾರಿಗಳು ಬಿಗ್ ಬಾಸ್ ಮಾಜಿ ಸ್ಪರ್ಧಿ ಆ್ಯಡಂ ಪಾಷಾರನ್ನು ಬಂಧಿಸಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಬಾರಿ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಆ್ಯಡಮ್ ಪಾಷಾ ರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಪ್ರಕರಣದಲ್ಲಿ ಬಂಧಿತಳಾದ ಡ್ರಗ್ಸ್ ಪೆಡ್ಲರ್ ಅನಿಕಾ, ಆ್ಯಡಂ ಪಾಷಾ ತನ್ನ ಬಳಿ ಡ್ರಗ್ಸ್ ಖರೀದಿಸುತ್ತಿದ್ದ ಎಂಬ ಮಾಹಿತಿಯೊಂದನ್ನು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾಳೆ. ಹೀಗಾಗಿ ಅನಿಕಾಳಿಂದ ಡ್ರಗ್ಸ್ ಖರೀದಿ ಆರೋಪದಡಿ ಪಾಷಾ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ವಿಭಾಗದ ಮುಖ್ಯಸ್ಥ ಅಮಿತ್ ಗವಾಟೆ ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಮಾದಕ ಜಾಲದ ನಂಟು ಆರೋಪದಡಿ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅಲ್ಲದೇ, ಈಗಾಗಲೇ ಸ್ಯಾಂಡಲ್ ವುಡ್ ನಟ ದಿಗಂತ್ ಹಾಗೂ ಐಂದ್ರಿತಾ ರೈ, ನಿರೂಪಕಿ ಅನುಶ್ರೀ ಸೇರಿ ಕೆಲ ಕಿರುತೆರೆ ಕಲಾವಿದರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com