ಡ್ರಗ್ಸ್ ದಂಧೆ ಬಗ್ಗೆ ನಾನೊಬ್ಬ ಮೆಸೆಂಜರ್: ಡೋಂಟ್ ಕಿಲ್ ದಿ ಮೆಸೆಂಜರ್; ಇಂದ್ರಜಿತ್ ಲಂಕೇಶ್

ಸದ್ಯ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ದಂಧೆ ಸಂಬಂಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದೂ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾದರು.
ಇಂದ್ರಜಿತ್ ಲಂಕೇಶ್
ಇಂದ್ರಜಿತ್ ಲಂಕೇಶ್

ಬೆಂಗಳೂರು: ಸದ್ಯ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ದಂಧೆ ಸಂಬಂಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದೂ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾದರು.

ಸುಮಾರು 45 ನಿಮಿಷಗಳ ಕಾಲ ನಡೆದ ವಿಚಾರಣೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಲಂಕೇಶ್, ನಾನು ಒಬ್ಬ ಮೆಸೆಂಜರ್ ಅಷ್ಟೇ. ಸಿಸಿಬಿ ವಿಚಾರಣೆ ವಿಚಾರದಲ್ಲಿ ನಾನು ಏನು ಹೇಳಿದ್ದೇನೋ ಅದಕ್ಕೆ ನಾನು ಬದ್ಧವಾಗಿದ್ದೇನೆ. ಮಾಧ್ಯಮದಲ್ಲಿ ಏನು ಹೇಳಿದ್ದೇನೋ ಅದೆಲ್ಲವೂ ಸತ್ಯ. ಡ್ರಗ್ ಮಾಫಿಯಾ ವಿಚಾರದಲ್ಲಿ ನಾನು ಪೊಲೀಸರಿಗೆ ಪಾರಿವಾಳದಂತೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.  ನಾನು ನೀಡಿದ ಮಾಹಿತಿ ಆಧಾರದಂತೆ ಸಿಸಿಬಿ ಪೊಲೀಸರು ತನಿಖೆ ನಡೆಸಲಿದ್ದಾರೆ.

ನಮ್ಮ ತಂದೆ 30 ವರ್ಷಗಳಿಂದ ಚಿತ್ರರಂಗದಲ್ಲಿದ್ದರು. ನಾನು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದೇನೆ. 9 ಕನ್ನಡ ಸಿನಿಮಾ ನಿರ್ದೇಶನ ಮಾಡಿದ್ದೇನೆ. ನಾವು ಸಿನಿಮಾದವರೇ, ನಾವು ಚಿತ್ರರಂಗಕ್ಕೆ ಸೇರಿದ್ದೇವೆ. ಚಿತ್ರರಂಗದ ಒಳಿತಿಗಾಗಿ ಈ ವಿಚಾರದಲ್ಲಿ ಬಹಿರಂಗವಾಗಿ ಮಾತನಾಡುತ್ತಿದ್ದೇನೆ ಎಂದು ತಿಳಿಸಿದರು. ಕನ್ನಡ ಸಿನಿಮಾ ಇಂಡಸ್ಟ್ರಿ ಕ್ಲೀನ್ ಆಗಬೇಕು ಎಂದು ಆಶಯ ವ್ಯಕ್ತ ಪಡಿಸಿದ್ದಾರೆ.

ನಾನು ಕೊಟ್ಟಿರುವ ಮಾಹಿತಿ ಆಧರಿಸಿ ಪೋಲೀಸರಿಗೆ ಸರಿಯಾಗಿ ತನಿಖೆ ಮಾಡಬೇಕು. ನೀಡಿದ ಮಾಹಿತಿಯನ್ನ ಆಧರಿಸಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ನನ್ನ ಪರ ವಿರೋಧದ ಚರ್ಚೆ ಯ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಒಂದು ಪ್ರಕರಣದಿಂದ ಕಾನೂನಿನ ರೀತಿಯಲ್ಲಿ , ಚಿತ್ರರಂಗಕ್ಕೆ ಒಳ್ಳೆಯದಾದರೆ ಅದೇ ನನಗೆ ದೊಡ್ಡ ಸಂತೋಷ. ಮುಂದಾದರೂ ಆ ಕಳಂಕ ಬಾರದಂತೆ ನೋಡಿಕೊಳ್ಳಿ ಎಂದು ಇಂದ್ರಜಿತ್‌ ಲಂಕೇಶ್‌ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com