ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಬಗ್ಗೆ ಶೀಘ್ರ ಗುಡ್ ನ್ಯೂಸ್: ಚರಣ್

ಗಾನ ಗಂಧರ್ವ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೋನಾ ವಕ್ಕರಿಸಿದ ನಂತರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಬೇಗ ಚೇತರಿಸಿಕೊಳ್ಳಲು ಇಡೀ ದೇಶ ಪ್ರಾರ್ಥಿಸುತ್ತಿದೆ. 
ಎಸ್ ಪಿ ಬಾಲಸುಬ್ರಹ್ಮಣ್ಯಂ-ಚರಣ್
ಎಸ್ ಪಿ ಬಾಲಸುಬ್ರಹ್ಮಣ್ಯಂ-ಚರಣ್
Updated on

ಚೆನ್ನೈ: ಗಾನ ಗಂಧರ್ವ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೋನಾ ವಕ್ಕರಿಸಿದ ನಂತರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಬೇಗ ಚೇತರಿಸಿಕೊಳ್ಳಲು ಇಡೀ ದೇಶ ಪ್ರಾರ್ಥಿಸುತ್ತಿದೆ. 

ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಕುರಿತಂತೆ ಪುತ್ರ ಚರಣ್ ದಿನಂ ಪ್ರತಿ ಹೆಲ್ತ್ ಅಪ್ ಡೇಟ್ ಮಾಡುತ್ತಿದ್ದಾರೆ. ಇದೀಗ ಚರಣ್ ಅವರು ನಮ್ಮ ತಂದೆ ಆರೋಗ್ಯ ಸ್ಥಿರವಾಗಿದೆ. ಈ ವಾರಂತ್ಯ ಅಥವಾ ಸೋಮವಾರದ ಹೊತ್ತಿಗೆ ಸಿಹಿ ಸುದ್ದಿ ಸಿಗಲಿದೆ ಎಂದು ತಾವು ನಂಬಿರುವುದಾಗಿ ಹೇಳಿದ್ದಾರೆ. 

ದೇವರ ಆಶೀರ್ವಾದ ಮತ್ತು ನಿಮ್ಮೆಲ್ಲರ ಪ್ರಾರ್ಥನೆಯಿಂದಾಗಿ ಸೋಮವಾರ ಒಂದು ಶುಭ ಸುದ್ದಿ ಸಿಗಲಿದೆ ಎಂದು ನಂಬಿದ್ದೇನೆ ಎಂದು ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ. ಈ ಕಂಡ ಅಭಿಮಾನಿಗಳು ಕೊಂಚ ನಿರಾಳರಾಗಿದ್ದಾರೆ. 

74 ವರ್ಷದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಸತತ 28 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಅವರು ಬಹುಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com