ಡ್ರಗ್ಸ್ ಜಾಲದ ದಂಧೆ, ನಟಿ ರಾಗಿಣಿ ದ್ವಿವೇದಿ ಎರಡನೇ ಆರೋಪಿ 

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ  ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಎರಡನೇ ಆರೋಪಿಯಾಗಿದ್ದಾರೆ.
ರಾಗಿಣಿ ದ್ವಿವೇದಿ
ರಾಗಿಣಿ ದ್ವಿವೇದಿ
Updated on

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ  ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಎರಡನೇ ಆರೋಪಿಯಾಗಿದ್ದಾರೆ.

ಅಪರಾಧ ಒಳಸಂಚು ಅಡಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆ 21, 21ಸಿ,  27ಎ, 27ಬಿ,29 ಐಪಿಸಿ 120ಬಿ ಅಡಿ ರಾಗಿಣಿ ವಿರುದ್ಧ ಪ್ರಕರಣ ದಾಖಲಾಗಿದೆ. ಒಟ್ಟು 12 ಜನ ಆರೋಪಿಗಳನ್ನಾಗಿ ಹೆಸರಿಸಲಾಗಿದ್ದು, ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 

ಶಿವಪ್ರಕಾಶ್ ಎ1, ರಾಗಿಣಿ ದ್ವಿವೇದಿ ಎ2, ವೀರೇನ್ ಖನ್ನಾ ಎ 3,ಪ್ರಶಾಂತ್ ರಂಕಾ ಎ4,ವೈಭವ್ ಜೈನ್ ಎ5, ಆದಿತ್ಯ ಆಳ್ವಾ ಎ6, ಲೂಮ್ ಪೆಪ್ಪರ್ ಎ7, ಪ್ರಶಾತ್ ರಿಜು ಎ8,ಅಶ್ವಿನ್ ಎ9,ಅಭಿ ಸ್ವಾಮಿ ಎ10, ರಾಹುಲ್ ಎ11, ವಿನಯ್ ಎ12 ಆರೋಪಿಗಳಾಗಿದ್ದಾರೆ ಎಂದು  ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com