ಸ್ಯಾಂಡಲ್ವುಡ್ ಡ್ರಗ್ ಪ್ರಕರಣ: ನಟಿ ಐಂದ್ರಿತಾ, ದಿಗಂತ್ ದಂಪತಿಗೆ ಸಿಸಿಬಿ ನೋಟಿಸ್

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ದಿನ ಕಳೆದಂತೆ ಸೆಲೆಬ್ರಿಟಿಗಳ ಹೆಸರು ಕೇಳಿಬರುತ್ತಿದ್ದು ಇದೀಗ ನಟಿ ಐಂದ್ರಿತಾ ರೈ ಮತ್ತು ದಿಗಂತ್ ಗೆ ಸಿಸಿಬಿ ನೋಟಿಸ್ ನೀಡಿದೆ.
ಐಂದ್ರಿತಾ ರೇ-ದಿಗಂತ್
ಐಂದ್ರಿತಾ ರೇ-ದಿಗಂತ್
Updated on

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ದಿನ ಕಳೆದಂತೆ ಸೆಲೆಬ್ರಿಟಿಗಳ ಹೆಸರು ಕೇಳಿಬರುತ್ತಿದ್ದು ಇದೀಗ ನಟಿ ಐಂದ್ರಿತಾ ರೈ ಮತ್ತು ದಿಗಂತ್ ಗೆ ಸಿಸಿಬಿ ನೋಟಿಸ್ ನೀಡಿದೆ. 

ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಶೇಕ್ ಫಾಝಿಲ್ ಹೆಸರು ಮುಖ್ಯವಾಗಿ ಕೇಳಿಬಂದಿದೆ. ಇನ್ನು ಪ್ರಕರಣ ಬೆಳಕಿಗೆ ಬಂದ ನಂತರ ಫಾಝಿಲ್ ತಲೆ ಮರೆಸಿಕೊಂಡಿದ್ದಾನೆ. ಆದರೆ ಫಾಝಿಲ್ ಜೊತೆ ನಂಟು ಹೊಂದಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಇದೀಗ ನಟಿ ಐಂದ್ರಿತಾ ರೇ ಮತ್ತು ದಿಗಂತ್ ಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. 

ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. 

ಇನ್ನುಶೇಕ್ ಫಾಝಿಲ್ ಜೊತೆಗಿನ ಐಂದ್ರಿತಾ ರೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಪ್ರಕರಣದಲ್ಲಿ ಐಂದ್ರಿತಾ ರೇ ಸಹ ನಂಟು ಹೊಂದಿದ್ದಾರಾ ಎಂಬ ಸಂಶಯ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com