
ಸ್ಯಾಂಡಲ್ ವುಡ್ ನಲ್ಲಿ ಮಾದಕ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟ ದಿಗಂತ್ ಎರಡನೇ ಬಾರಿ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ.
ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಮುಗಿಸಿ ಹೊರಬಂದ ಬಳಿಕ ಸುದ್ದಿಗಾರರೊಡನೆ ಮಾತನಾಡಿ, ಸಿಸಿಬಿಗೆ ನನ್ನ ಬಳಿಯಿದ್ದ ಅಗತ್ಯ ಮಾಹಿತಿ ನೀಡಿರುವೆ. ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ. ತನಿಖೆ ಪ್ರಗತಿಯಲ್ಲಿರುವ ಕಾರಣ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವಂತಿಲ್ಲ ಎಂದರು.
ಬೆಂಗಳೂರಿನ ಹೆಚ್‍ಎಂಟಿ ಬಳಿ "ಮಾರಿಗೋಲ್ಡ್" ಚಿತ್ರೀಕರಣ ನಡೆಯುತ್ತಿದ್ದು ಇಂದು ಅಲ್ಲಿಂದಲೇ ದಿಗಂತ್ ನೇರವಾಗಿ ಸಿಸಿಬಿ ಕಚೇರಿಗೆ ಆಗಮಿಸಿದ್ದರು.
ಇದಕ್ಕೆ ಒಂದು ವಾರದ ಹಿಂದಷ್ಟೇ ನಟ ದಿಗಂತ್ ಹಾಗೂ ಅವರ ಪತ್ನಿ ನಟಿ ಐಂದ್ರಿತಾ ರೇ ಇಬ್ಬರನ್ನೂ ಸಿಸಿಬಿ ವಿಚಾರಣೆ ನಡೆಸಿತ್ತು.
Advertisement