ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ವಿಧಿವಶ

ಬುಲೆಟ್ ಪ್ರಕಾಶ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಪ್ತರಾಗಿದ್ದಾರೆ. ಈವರೀಗೆ ಸುಮಾರು ಮುನ್ನೂರಕ್ಕೂ ಹೆಚ್ಚಿನ ಚಿತ್ರದಲ್ಲಿ ಅಭಿನಯಿಸಿರುವ ಬುಲೆಟ್ ಪ್ರಕಾಶ್ ತಮ್ಮ ಕಾಮಿಡಿ ಪಾತ್ರಗಳಿಂಡ ಪ್ರೇಕ್ಷಕರ ಮನಗೆದ್ದಿದ್ದರು.
ಬುಲೆಟ್ ಪ್ರಕಾಶ್
ಬುಲೆಟ್ ಪ್ರಕಾಶ್
Updated on

ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ವಿಧಿವಶರಾಗಿದ್ದಾರೆ. 

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 1976ರಲ್ಲಿ ಏ.2ರಂದು ಬೆಂಗಳೂರಿನ ಬಡ ಕುಟುಂಬದಲ್ಲಿ ಪ್ರಕಾಶ್​ ಅವರು ಜನಿಸಿದ್ದರು.

44 ವರ್ಷದ ಬುಲೆಟ್ ಪ್ರಕಾಶ್ ಅವರು ಬಹುಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. 

ಕಳೆದ ಐದು ದಿನಗಳಿಂದ ಕನ್ನಿಂಗ್ ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ವೈದ್ಯ ಡಾ. ತೇಜಸ್ವಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. "ಗ್ಯಾಸ್ಟಿಕ್ ಸಮಸ್ಯೆಯ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ ಅವರಿಗೆ ಲಿವರ್ ಹಾಗೂ ಕಿಡ್ನಿ ಸಮಸ್ಯೆ ಕಾಣಿಸಿದ್ದು ವೆಂಟಿಲೇಟರ್ ಮೂಲಕ ಉಸಿರಾಟ ನಡೆಸಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಹೇಳಿದ್ದವು.

ಬುಲೆಟ್ ಪ್ರಕಾಶ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಪ್ತರಾಗಿದ್ದು ಕಲಾಸಿ ಪಾಳ್ಯ, 'ಜಾಕಿ', 'ಬೊಂಬಾಯಿ ಮಿಠಾಯಿ', 'ಭೀಷ್ಮ', 'ಮಸ್ತ್ ಮಜಾ ಮಾಡಿ' ಸೇರಿದಂತೆ 325 ಚಿತ್ರಗಳಲ್ಲಿ ನಟಿಸಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ದರ್ಶನ್, ಶಿವರಾಜ್‌ಕುಮಾರ್, ಉಪೇಂದ್ರ, ಸುದೀಪ್ ಮುಂತಾದ ಸಿನಿ ನಟರ ಜೊತೆ ಬುಲೆಟ್ ಪ್ರಕಾಶ್ ಅಭಿನಯಿಸಿದ್ದಾರೆ.

ಪ್ರಕಾಶ್ ಅವರ ನಿಧನಕ್ಕೆ ಚಿತ್ರರಂಗ ಸೇರಿದಂತೆ ವಿವಿಧ ರಂಗಗಳ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com