ಹೈದರಾಬಾದ್: ನೇಣು ಬಿಗಿದ ಸ್ಧತಿಯಲ್ಲಿ ತೆಲುಗು ಧಾರಾವಾಹಿ ನಟಿ ಶವ ಪತ್ತೆ

32 ವರ್ಷದ ಧಾರಾವಾಹಿ ನಟಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿ. ಶಾಂತಿ ಎಂಬುವರ ಶವ ಅವರ ಅಪಾರ್ಟ್ ಮೆಂಟ್ ನ  ಫ್ಲಾಟ್ ನ ಬೆಡ್ ಮೇಲೆ ಪತ್ತೆಯಾಗಿದೆ. ನೆರೆಮನೆಯವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೈದರಾಬಾದ್: 32 ವರ್ಷದ ಧಾರಾವಾಹಿ ನಟಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿ. ಶಾಂತಿ ಎಂಬುವರ ಶವ ಅವರ ಅಪಾರ್ಟ್ ಮೆಂಟ್ ನ ಫ್ಲಾಟ್ ನ ಬೆಡ್ ಮೇಲೆ ಪತ್ತೆಯಾಗಿದೆ. ನೆರೆಮನೆಯವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

ಪೊಲೀಸರು ಬಂದು ಬಾಗಿಲು ಮುರಿದು ನೋಡಿದಾಗ ವಿಷಯ ತಿಳಿದು ಬಂದಿದೆ. ಕುಡಿದ ಮತ್ತಿನಲ್ಲಿ ಬಿದ್ದು ಸಾವನ್ನಪ್ಪಿರಬುದು ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ನಂತರ ನಿಜ ಸಂಗತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಆಕೆಯ ಪೋಷಕರು ವಿಶಾಖಪಟ್ಟಣದಲ್ಲಿದ್ದು, ಅವರಿಗೆ ಮಾಹಿತಿ ತಿಳಿಸಲಾಗಿದೆ. ಈ  ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com