ಅಭಿಮಾನಿಗಳಿಗೆ ನಿರಾಶೆ: ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ನಂತರ ರಾಬರ್ಟ್ ದರ್ಶನ- ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ಚಿತ್ರವಾಗಿದ್ದು ಏಪ್ರಿಲ್ ನಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಸದ್ಯ ಪರಿಸ್ಥಿತಿ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. 
ದರ್ಶನ್
ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ಚಿತ್ರವಾಗಿದ್ದು ಏಪ್ರಿಲ್ ನಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಸದ್ಯ ಪರಿಸ್ಥಿತಿ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. 

ಈ ಬಗ್ಗೆ ಕಳೆದ ಶುಕ್ರವಾರ ಗುಡ್ ಫ್ರೈಡೆಯಂದು ಟ್ವೀಟ್ ಮಾಡಿರುವ ದರ್ಶನ್ 'ದೇವರ ಮೇಲಿನ ನಿಮ್ಮ ನಂಬಿಕೆಯು ನಿಮ್ಮ ಜೀವನದಲ್ಲಿ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ' ಎಂದು ಬರೆದಿದ್ದಾರೆ. ಇದರ ಜೊತೆಗೆ ತಮ್ಮ ಮುಂದಿನ ಚಿತ್ರದ ಕುರಿತು ಬರೆದಿದ್ದು ಪರಿಸ್ಥಿತಿಗಳು ಸಹಜ ಸ್ಥಿತಿಗೆ ಮರಳಿದ ನಂತರ ರಾಬರ್ಟ್ ಚಿತ್ರ ಬಿಡುಗಡೆಯಾಗಲಿದೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಚಿತ್ರವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದು ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಿಸುತ್ತಿದ್ದಾರೆ. ದರ್ಶನ್ಗೆ ಜೋಡಿಯಾಗಿ ಆಶಾ ಭಟ್ ನಟಿಸುತ್ತಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com