ಬೆಂಗಳೂರು ಗಲಭೆ: ಧಾರ್ಮಿಕ ಮತಾಂಧತೆಯನ್ನು ಬಲವಾಗಿ ಖಂಡಿಸುತ್ತೇನೆ - ಪ್ರಕಾಶ್ ರಾಜ್

ಮುಸ್ಲಿಂ ಸಮುದಾಯ ವಿರುದ್ಧದ ಫೇಸ್ ಬುಕ್ ಪೋಸ್ಟ್ ಸಂಬಂಧ ಬೆಂಗಳೂರಿನಲ್ಲಿ ನಡೆದ ಕೋಮುಗಲಭೆಯನ್ನು ನಟ ಪ್ರಕಾಶ್ ರಾಜ್ ಬಲವಾಗಿ ಖಂಡಿಸಿದ್ದಾರೆ. 
ಪ್ರಕಾಶ್ ರಾಜ್
ಪ್ರಕಾಶ್ ರಾಜ್

ಬೆಂಗಳೂರು: ಮುಸ್ಲಿಂ ಸಮುದಾಯ ವಿರುದ್ಧದ ಫೇಸ್ ಬುಕ್ ಪೋಸ್ಟ್ ಸಂಬಂಧ ಬೆಂಗಳೂರಿನಲ್ಲಿ ನಡೆದ ಕೋಮುಗಲಭೆಯನ್ನು ನಟ ಪ್ರಕಾಶ್ ರಾಜ್ ಬಲವಾಗಿ ಖಂಡಿಸಿದ್ದಾರೆ. 

ಬೆಂಗಳೂರಿನಲ್ಲಿ ನಡೆದ ಕೋಮುಗಲಭೆ ಅನಾಗರಿಕವಾದದ್ದು. ಈ ಧಾರ್ಮಿಕ ಮತಾಂಧತೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡ ಗೂಂಡಾಗಳಿಗೆ ಶಿಕ್ಷೆಯಾಗಬೇಕು. ಸಮಾಜದಲ್ಲಿದ್ದು ನಾವು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ. 

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿ ನವೀನ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಇದರಿಂದ ಕೋಪಗೊಂಡ ದುಷ್ಕರ್ಮಿಗಳು ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ. 

ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 60 ಪೊಲೀಸರಿಗೆ ಗಾಯಗಳಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಬೆಂಗಳೂರಿನ ಕಾವಲ್ ಭೈರಸಂದ್ರ, ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು ಪೊಲೀಸ್ ಠಾಣೆ ಮೇಲೆ ಸುಮಾರು 250ರಿಂದ 350ರಷ್ಟು ದಷ್ಕರ್ಮಿಗಳು ದಾಳಿ ಮಾಡಿದ್ದು, ಈ ವೇಳೆ ಪೊಲೀಸ್ ಠಾಣೆಯ ಪಾರ್ಕಿಂಗ್ ಜಾಗದಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com