ಕೆಜಿಎಫ್-2: ಸಂಜಯ್ ದತ್ ನಟನೆ ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬಾಲಿವುಡ್ ನಟ ಸಂಜಯ್ ದತ್ ಅಭಿನಯಿಸಿರುವ 'ಕೆಜಿಎಫ್- 2' ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
Published: 17th August 2020 09:17 PM | Last Updated: 17th August 2020 09:17 PM | A+A A-

ಕೆಜಿಎಫ್ -2 ಚಿತ್ರದ ಪೋಸ್ಟರ್
ಬೆಂಗಳೂರು: ಬಾಲಿವುಡ್ ನಟ ಸಂಜಯ್ ದತ್ ಅಭಿನಯಿಸಿರುವ 'ಕೆಜಿಎಫ್- 2' ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಹುಬ್ಬಳ್ಳಿಯ ಸಿದ್ಧಾರೂಢನಗರದ ನಿವಾಸಿ ಜಿ. ಶಿವಶಂಕರ್ ಎಂಬುವರು ಪಿಐಎಲ್ ಸಲ್ಲಿಸಿದ್ದು, ಸಿನಿಮಾದಲ್ಲಿ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಸಂಜಯ್ ದತ್ ಅಭಿನಯಿಸಿದ್ದಾರೆ. ಆದ್ದರಿಂದ ಸಿನಿಮಾ ಬಿಡುಗಡೆಗೆ ಅವಕಾಶ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಆದರೆ, ಅರ್ಜಿಯನ್ನು ಮಾನ್ಯ ಮಾಡಲು ನಿರಾಕರಿಸಿದ ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್
ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ, ಸಿನಿಮಾದಲ್ಲಿ ಸಂಜಯ್ ದತ್ ಅಭಿನಯಿಸುವುದು ಕಾನೂನು ಬಾಹಿರ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ ಎಂದು ಅಭಿಪ್ರಾಯಪಟ್ಟಿತು.