ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಸ್ಥಿರತೆ- ಆಸ್ಪತ್ರೆ

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿರುವ ದೇಶದ ಹೆಮ್ಮೆಯ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಶುಕ್ರವಾರ ತಿಳಿಸಿದೆ.
ಎಸ್ ಪಿ ಬಾಲಸುಬ್ರಹ್ಮಣ್ಯಂ
ಎಸ್ ಪಿ ಬಾಲಸುಬ್ರಹ್ಮಣ್ಯಂ

ಚೆನ್ನೈ: ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿರುವ ದೇಶದ ಹೆಮ್ಮೆಯ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಶುಕ್ರವಾರ ತಿಳಿಸಿದೆ.

74 ವರ್ಷದ ನಟ, ಗಾಯಕ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್ ಹಾಗೂ ಇಸಿಎಂಒ ನೆರವಿನಲ್ಲಿ ಇರುವುದಾಗಿ ಎಂಜಿಎಂ ಹೆಲ್ತ್ ಕೇರ್ ನ ವೈದ್ಯಕೀಯ ಸೇವೆಯ ಸಹಾಯಕ ನಿರ್ದೇಶಕ ಡಾ. ಅನುರಾಧ ಭಾಸ್ಕರನ್ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.

ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಪ್ರಸ್ತುತ ಸ್ಥಿರವಾಗಿದೆ. ವೈದ್ಯಕೀಯ ತಜ್ಞರನ್ನೊಳಗೊಂಡ ಬಹು ಶಿಸ್ತಿನ ತಂಡ
ಹತ್ತಿರದಲ್ಲಿದ್ದು, ಎಸ್ ಪಿಬಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ. ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಪ್ರಗತಿ ಬಗ್ಗೆ
ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಭಾಸ್ಕರನ್ ಹೇಳಿದ್ದಾರೆ.

ಎಸ್ ಪಿ ಬಾಲಸುಬ್ರಹ್ಮಣ್ಯರಂ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸಿರುವ ಎಲ್ಲರಿಗೂ ಧನ್ಯವಾದ ಆರ್ಪಿಸಿರುವ ಅವರ
ಪುತ್ರ ಚರಣ್, ನಿನ್ನೆ ಗಂಭೀರ ಪರಿಸ್ಥಿತಿಯಲ್ಲಿದ್ದ ತಮ್ಮ ತಂದೆಯ ಆರೋಗ್ಯ ಇಂದು ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂಬರ್ಥವಲ್ಲಾ, ಅವರ ದೇಹದ ಎಲ್ಲಾ ಭಾಗಗಳು ಕಾರ್ಯನಿರ್ವಹಿಸುತ್ತಿದ್ದು, ವೈದ್ಯರ
 ತಂಡದ ಮೇಲೆ ಸಂಪೂರ್ಣ ನಂಬಿಕೆ ಹೊಂದಿದ್ದೇವೆ ಎಂದು ಚರಣ್ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ಜನಪ್ರಿಯ ಗಾಯಕರಾಗಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಕೋವಿಡ್-19 ತಗುಲಿದ ಬಳಿಕ ಆಗಸ್ಟ್ 5 ರಿಂದ ಆಸ್ಪತ್ರೆಯಲ್ಲಿ
ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com