ಎಸ್ ಪಿಬಿ ಆರೋಗ್ಯ ಸ್ಥಿರವಾಗಿದ್ದು, ಪುತ್ರನಿಗೆ ಕೈಸನ್ನೆ ಮಾಡಿದ್ದರು:ಎಂಜಿಎಂ ಆಸ್ಪತ್ರೆ ವೈದ್ಯರು

ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು ಅವರು ಪ್ರಜ್ಞಾವಸ್ಥೆ ಸ್ಥಿತಿಯಲ್ಲಿದ್ದಾರೆ ಎಂದು ಚೆನ್ನೈಯ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆ ತಿಳಿಸಿದೆ.
ಎಸ್ ಪಿ ಬಾಲಸುಬ್ರಹ್ಮಣ್ಯಂ(ಸಂಗ್ರಹ ಚಿತ್ರ)
ಎಸ್ ಪಿ ಬಾಲಸುಬ್ರಹ್ಮಣ್ಯಂ(ಸಂಗ್ರಹ ಚಿತ್ರ)

ಚೆನ್ನೈ: ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು ಅವರು ಪ್ರಜ್ಞಾವಸ್ಥೆ ಸ್ಥಿತಿಯಲ್ಲಿದ್ದಾರೆ ಎಂದು ಚೆನ್ನೈಯ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆ ತಿಳಿಸಿದೆ.

ಈ ವಿಷಯ ಲಕ್ಷಾಂತರ ಮಂದಿ ಎಸ್ ಪಿಬಿ ಅಭಿಮಾನಿಗಳಿಗೆ ಖುಷಿಯ ವಿಚಾರ. ನಿನ್ನೆ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಆಸ್ಪತ್ರೆಯ ವೈದ್ಯಾಧಿಕಾರಿಗಳು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿ, ಕೈಸನ್ನೆ ಮೂಲಕ ಅವರ ಪುತ್ರ ಚರಣ್ ಅವರೊಂದಿಗೆ ಮೊನ್ನೆ ಸಂವಹನ ನಡೆಸಿದ್ದರು ಎಂದು ತಿಳಿಸಿದ್ದಾರೆ.

ಅಂದರೆ ಆಸ್ಪತ್ರೆಯ ವೈದ್ಯರ ಹೇಳಿಕೆ ಪ್ರಕಾರ ಎಸ್ ಪಿಬಿಯವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಬಹು ಅಂಗಾಂಗ ವಿಶೇಷ ತಜ್ಞರು ಅವರಿಗೆ ನಿರಂತರವಾಗಿ ಚಿಕಿತ್ಸೆ ನೀಡುತ್ತಾ ನಿಗಾ ವಹಿಸುತ್ತಾ ಸೂಕ್ಷ್ಮವಾಗಿ ನೋಡಿಕೊಳ್ಳುತ್ತಿದ್ದಾರೆ.

ಕೋವಿಡ್-19ನಿಂದಾಗಿ ಅವರ ಶ್ವಾಸಕೋಶಕ್ಕೆ ಹಾನಿಯಾಗಿದ್ದರೂ ಕೂಡ ಉಳಿದ ಅಂಗಾಂಗಗಳು ಸರಿಯಾಗಿ ಕೆಲಸ ಮಾಡುತ್ತಿವೆ. ಈ ಹಂತದಲ್ಲಿ ನಾವು ಅವರ ಶ್ವಾಸಕೋಶದ ಆರೋಗ್ಯ ಸುಧಾರಣೆಗೆ ಶ್ರಮಿಸುತ್ತಿದ್ದೇವೆ, ಅವರ ಕುಟುಂಬದವರು, ಅವರ ಮಗ ಭೇಟಿ ಮಾಡಿದ್ದ ಸಂದರ್ಭದಲ್ಲಿ ಗಾಯಕ ಕೈಸನ್ನೆ ಮೂಲಕ ಸಂವಹನ ನಡೆಸಿದ್ದಾರೆ. ಅವರು ಪ್ರಜ್ಞಾವಸ್ಥ ಸ್ಥಿತಿಯಲ್ಲಿದ್ದು ಆರೋಗ್ಯ ಸ್ಥಿರವಾಗಿದೆ. ಆದರೆ ಮಾತನಾಡುವ ಸ್ಥಿತಿಗೆ ಇನ್ನೂ ಬಂದಿಲ್ಲ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರುವುದಂತೂ ನಿಜ, ಅವರು ಗುಣಮುಖರಾಗುತ್ತಾರೆ ಎಂದು ನಾವು ಆಶಾಭಾವನೆ ಹೊಂದಿದ್ದೇವೆ ಎಂದು ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯ ನಿರ್ದೇಶಕ ಡಾ ಪ್ರಶಾಂತ್ ರಾಜಗೋಪಾಲನ್ ತಿಳಿಸಿದ್ದಾರೆ.

ಕೊರೋನಾ ಸೋಂಕು ಕಾಣಿಸಿಕೊಂಡು ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಪಿಬಿ ನಂತರ ಆಗಸ್ಟ್ 13ರಂದು ಐಸಿಯುಗೆ ಶಿಫ್ಟ್ ಆಗಿದ್ದರು. ಅಲ್ಲಿಂದ ವೆಂಟಿಲೇಟರ್ ನೆರವಿನಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com