ನಟಿ ಸಂಜನಾ ಜಾಮೀನು ಅರ್ಜಿ: ಡಿ.7ಕ್ಕೆ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪನ್ನು ಡಿಸೆಂಬರ್ 7ಕ್ಕೆ ಕಾಯ್ದಿರಿಸಿದೆ.
ನಟಿ ಸಂಜನಾ ಗಲ್ರಾನಿ
ನಟಿ ಸಂಜನಾ ಗಲ್ರಾನಿ

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪನ್ನು ಡಿಸೆಂಬರ್ 7ಕ್ಕೆ ಕಾಯ್ದಿರಿಸಿದೆ.

ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ನಟಿ ಸಂಜನಾ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ಇಂದು ವಿಚಾರಣೆ ನಡೆಸಿತು.

ಈ ವೇಳೆ ಆರೋಪಿ ನಟಿ ಪರ ಹಿರಿಯ ವಕೀಲ ಹಸ್ಮತ್ ಪಾಷಾ ವಾದ ಮಂಡಿಸಿ, ಸಂಜನಾಗೆ ಅನಾರೋಗ್ಯ ಸಮಸ್ಯೆ ಇದೆ. 2018ರಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಸರ್ಜರಿಗೆ ಒಳಗಾಗಿದ್ದರು. 2019ರಿಂದ ಅಸ್ತಮಾ ಹಾಗೂ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ಅವರಿಗೆ ಚಳಿಗಾಲದಲ್ಲಿ ಸಮಸ್ಯೆ ಉಲ್ಬಣಿಸಲಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ. ಆದ್ದರಿಂದ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಇನ್ನು ಸರ್ಕಾರದ ಪರ ವಾದ ಮಂಡಿಸಿದ ಎಸ್​ಪಿಪಿ ವೀರಣ್ಣ ತಿಗಡಿ ಅವರು, ಆರೋಪಿಗೆ ಈಗಾಗಲೇ ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ಜಾಮೀನು ತಿರಸ್ಕರಿಸಿವೆ. ಆಗಲೂ ಅನಾರೋಗ್ಯದ ನೆಪ ಒಡ್ಡಿದ್ದರು. ಸೂಕ್ತ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಬಹುದು. ಅದಕ್ಕಾಗಿ ಜಾಮೀನು ನೀಡಬಾರದು. ಜಾಮೀನು ನೀಡಿದರೆ ಆರೋಪಿ ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com