ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ನಟಿ ಸಂಜನಾ ಜಾಮೀನು ಅರ್ಜಿ ಡಿಸೆಂಬರ್ 10ಕ್ಕೆ ಮುಂದೂಡಿಕೆ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಲಾಗಿದೆ.
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಲಾಗಿದೆ.

ಸಂಜನಾ ಅನಾರೋಗ್ಯದ ಕಾರಣ  ನೀಡಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ "ಆರೋಪಿಗೆ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಿ, ಚಿತ್ರೀಕರಣಕ್ಕೆ ಅವಕಾಶ ಬೇಡ. ಚಿಕಿತ್ಸೆ ಸಂಬಂಧ ಡಿಸೆಂಬರ್ 10ರ ಒಳಗೆ ವರದಿ ಕೊಡಿರಿ" ಎಂದು ಆದೇಶಿಸಿದೆ.

ಅಲ್ಲದೆ ಆ ವರದಿ ಬಂದ ನಂತರ ಜಾಮೀನಿನ ಬಗ್ಗೆ ನಿರ್ಧರಿಸೋಣ ಎಂದೂ ನ್ಯಾಯಾಲಯ ಹೇಳಿದೆ.

ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ಕಳೆದ ಎರಡೂವರೆ ತಿಂಗಳುಗಳಿನಿಂದ ಜೈಲಿನಲ್ಲಿದ್ದು ಜಾಮೀನಿಗಾಗಿ ಸತತ ಪ್ರಯತ್ನ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com