ಸೂಪರ್ ಸ್ಟಾರ್ ರಜಿನಿಕಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್!

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

Published: 27th December 2020 08:06 PM  |   Last Updated: 27th December 2020 08:10 PM   |  A+A-


Rajinikanth

ರಜಿನಿಕಾಂತ್

Posted By : Srinivasamurthy VN
Source : The New Indian Express

ಹೈದರಾಬಾದ್‌: ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ಈ ಹಿಂದೆ ತೀವ್ರ ರಕ್ತದೊತ್ತಡದ ಸಮಸ್ಯೆಯಿಂದಾಗಿ ಅವರು ಡಿಸೆಂಬರ್‌ 25ರಂದು ಇಲ್ಲಿನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಬಳಿಕ ರಜಿನಿಕಾಂತ್ ಅವರ ರಕ್ತದೊತ್ತಡ ಸ್ಥಿರವಾಗಿದ್ದು, ಆರೋಗ್ಯ ಸುಧಾರಿಸಿದೆ. ಅಂತೆಯೇ ಒಂದು ವಾರ ಸಂಪೂರ್ಣ ವಿಶ್ರಾಂತಿ ಮತ್ತು ರಕ್ತದೊತ್ತಡದ ಮೇಲೆ  ನಿಗಾವಹಿಸುವುದು, ದೈಹಿಕಶ್ರಮ ವಹಿಸದಿರುವುದು ಹಾಗೂ ಒತ್ತಡಕ್ಕೆ ಒಳಗಾಗಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

2021ರ ಜನವರಿಯಲ್ಲಿ ರಜನಿಕಾಂತ್‌ ನೇತೃತ್ವದ ಹೊಸ ರಾಜಕೀಯ ಪಕ್ಷಕ್ಕೆ ಚಾಲನೆ ಸಿಗಲಿದ್ದು, ಡಿಸೆಂಬರ್‌ 31ರಂದು ಅಧಿಕೃತ ಪ್ರಕಟಣೆ ಹೊರ ಬೀಳುವ ಸಾಧ್ಯತೆಯಿದೆ. ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದ್ದು, ರಜನಿ ರಾಜಕೀಯ ಎಂಟ್ರಿ ತೀವ್ರ ಕುತೂಹಲ ಕೆರಳಿಸಿದೆ.

100%

ಇತ್ತ ಸಿನಿಮಾಗಳಲ್ಲೂ ಬಿಸಿಯಾಗಿರುವ ರಜಿನಿಕಾಂತ್ ಸನ್ ಪಿಕ್ಚರ್ಸ್ ನಿರ್ಮಾಣದ 'ಅಣ್ಣಾತೆ' ಎಂಬ ತಮಿಳು ಚಿತ್ರದ ಚಿತ್ರೀಕರಣಕ್ಕಾಗಿ ಡಿಸೆಂಬರ್ 13 ರಿಂದ ಹೈದರಾಬಾದ್‌ನಲ್ಲಿ ಬೀಡುಬಿಟ್ಟಿದ್ದಾರೆ. ಚಿತ್ರೀಕರಣ ತಂಡದಲ್ಲಿ ನಾಲ್ವರು ಸಿಬ್ಬಂದಿಗೆ ಕೋವಿಡ್‌-19 ದೃಢಪಟ್ಟ ಬೆನ್ನಲ್ಲೇ ರಜಿನಿಕಾಂತ್ ಪರೀಕ್ಷೆಗೆ  ಒಳಗಾಗಿದ್ದರು. ವರದಿ ನೆಗೆಟಿವ್ ಬಂದಿದ್ದರೂ ಅವರು ಪ್ರತ್ಯೇಕ ವಾಸದಲ್ಲಿದ್ದರು ಎನ್ನಲಾಗಿದೆ.
 

Stay up to date on all the latest ಸಿನಿಮಾ ಸುದ್ದಿ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp