ಬೆಂಗಳೂರು: ಗಂಡನ ಕಿರುಕುಳ, ಆತ್ಮಹತ್ಯೆಗೆ ಶರಣಾದ ಕನ್ನಡದ ಹಿನ್ನಲೆ ಗಾಯಕಿ!

ಕನ್ನಡ ಚಿತ್ರ, ಧಾರಾವಾಹಿ ಮತ್ತು ಸ್ಟೇಜ್ ಶೋಗಳಲ್ಲಿ ಹಾಡುತ್ತಿದ್ದ ಸುಷ್ಮಿತಾ ರಾಜೇ ಅವರು ತಮ್ಮ ತಾಯಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬರುತ್ತಿದೆ.

Published: 17th February 2020 03:59 PM  |   Last Updated: 17th February 2020 04:26 PM   |  A+A-


Sushmitha Raje

ಸುಷ್ಮಿತಾ ರಾಜೇ

Posted By : Vishwanath S
Source : Online Desk

ಕನ್ನಡ ಚಿತ್ರ, ಧಾರಾವಾಹಿ ಮತ್ತು ಸ್ಟೇಜ್ ಶೋಗಳಲ್ಲಿ ಹಾಡುತ್ತಿದ್ದ ಸುಷ್ಮಿತಾ ರಾಜೇ ಅವರು ತಮ್ಮ ತಾಯಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬರುತ್ತಿದೆ.

ಶರತ್ ಎಂಬುವರನ್ನು ಪ್ರೀತಿಸಿದ್ದ ಸುಶ್ಮಿತಾ ರಾಜೇ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಇನ್ನು ಗಂಡ ಹಾಗೂ ಆತನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಮಾಳಗಾಳದ ತಾಯಿ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. 

ಸಾವಿಗೂ ಮುನ್ನ ಸುಷ್ಮಿತಾ ಡೆತ್ ನೋಟು ಬರೆದು ಅದನ್ನು ವಾಟ್ಸ್ ಆ್ಯಪ್ ಮೂಲಕ ಸಹೋದರನಿಗೆ ಕಳುಹಿಸಿದ್ದು ಈ ಸಂದೇಶ ಸದ್ಯ ವೈರಲ್ ಆಗಿದೆ. 

ಸುಷ್ಮಿತಾ ಬರೆದಿರುವ ಡೆತ್ ನೋಟ್!
ಅಮ್ಮ ನನ್ನನ್ನು ಕ್ಷಮಿಸು. ನಾನೇ ಮಾಡಿಕೊಂಡ ತಪ್ಪಿಗೆ ನಾನೇ ಶಿಕ್ಷೆ ಅನುಭವಿಸುತ್ತಿದ್ದೇನೆ. ನನ್ನನ್ನು ದಯವಿಟ್ಟು ಕ್ಷಮಿಸು. ನನಗೆ ಅವರ ದೊಡ್ಡಮ್ಮನ ಮಾತು ಕೇಳಿಕೊಂಡು ಚಿತ್ರ ಹಿಂಸೆ ಕೊಡುತ್ತಿದ್ದರು. ಮಾತೆತ್ತಿದ್ರೆ ಮನೆ ಬಿಟ್ಟು ಹೋಗು ಅಂತಿದ್ರು. ನನಗೆ ಮಾನಸಿಕವಾಗಿ ತುಂಬಾ ಹಿಂಸೆ ಆಗುತ್ತಿತ್ತು. ಅವರನ್ನು ಮಾತ್ರ ಸುಮ್ಮನೇ ಬಿಡಬೇಡ. ನನ್ನ ಸಾವಿಗೆ ಶರತ್ ವೈದೇಹಿ, ಗೀತಾ ನೇರವಾಗಿ ಕಾರಣರಾಗಿರುತ್ತಾರೆ. ಎಷ್ಟು ಬೇಡಿಕೊಂಡು ಕಾಲು ಹಿಡಿದ್ರು ಅವನ ಮನಸ್ಸು ಕರಗಲಿಲ್ಲ. ಅವರ ಮನೆಯಲ್ಲಿ ನನಗೆ ಸಾಯಲು ಇಷ್ಟವಿರಲಿಲ್ಲ ಎಂದಿದ್ದಾರೆ. ... ಮದುವೆಯಾದಾಗಿನಿಂದ ಇದೆ ರೀತಿ ಹಿಂಸೆ ಅಮ್ಮ. ಯಾರ ಹತ್ತಿರಾನು ಹೇಳಿಕೊಂಡಿರಲಿಲ್ಲ. ನನ್ನನ್ನು ನಮ್ಮ ಊರಿನಲ್ಲಿ ಮಣ್ಣು ಮಾಡಿ. ಅಥವಾ ಸುಡುವ ಕಾರ್ಯವನ್ನು ನನ್ನ ತಮ್ಮನೇ ಮಾಡಲಿ. ಅವರನ್ನು ಮಾತ್ರ ಸುಮ್ಮನೆ ಬಿಡಬೇಡ. ಇಲ್ಲವಾದ್ರೇ, ನನ್ನ ಆತ್ಮಕ್ಕೆ ಶಾಂತಿ ದೊರೆಯುವುದಿಲ್ಲ. ಅಮ್ಮ ಮಿಸ್ ಯು. ನಿನಗೋಸ್ಕರ ನನ್ನ ತಮ್ಮ ಸಚಿನ್ ಇದ್ದಾನೆ. ಅವನನ್ನು ಚೆನ್ನಾಗಿ ನೋಡಿಕೋ. ಮತ್ತೊಮ್ಮೆ ಕ್ಷಮೆಯಾಚಿಸುತ್ತೇನೆ.

Stay up to date on all the latest ಸಿನಿಮಾ ಸುದ್ದಿ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp