ಹಿರಿಯ ನಟಿ ಕಿಶೋರಿ ಬಲ್ಲಾಳ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟಿ, ರಂಗಭೂಮಿ ಕಲಾವಿದೆ ಕಿಶೋರಿ ಬಲ್ಲಾಳ್ ಅವರು ಮಂಗಳವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

Published: 18th February 2020 03:22 PM  |   Last Updated: 18th February 2020 03:22 PM   |  A+A-


Veteran actress Kishori Ballal passes away

ಹಿರಿಯ ನಟಿ ಕಿಶೋರಿ ಬಲ್ಲಾಳ್ ನಿಧನ

Posted By : Srinivas Rao BV
Source : UNI

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ರಂಗಭೂಮಿ ಕಲಾವಿದೆ ಕಿಶೋರಿ ಬಲ್ಲಾಳ್ ಅವರು ಮಂಗಳವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟದ ತೊಂದರೆಯಿಂದ ಕಿಶೋರಿ ಬಲ್ಲಾಳ್ ಅವರು ವಿಧಿವಶರಾಗಿದ್ದಾರೆ ಎಂದು ಚಿತ್ರರಂಗದ ಮೂಲಗಳು ತಿಳಿಸಿವೆ.
ಕಿಶೋರಿ ಬಲ್ಲಾಳ್ ಅವರು ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಮಂಗಳೂರಿನವರು. ಬಲ್ಲಾಳ್ ಅವರು 1960 ರಲ್ಲಿ 'ಇವಳೆಂತ ಹೆಂಡತಿ' ಚಿತ್ರದ ಮೂಲಕ ಸಿನಿಮಾ ರಂಗ ಪ್ರವೇಶಿಸಿದ್ದರು. ಸುಮಾರು 75ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.

ಶಾರುಖ್ ಖಾನ್ ಜತೆ ಸ್ವದೇಶ್ ಹಿಂದಿ ಚಿತ್ರ ವೊಂದರಲ್ಲಿ ಕಿಶೋರಿ ಬಲ್ಲಾಳ್ ನಟಿಸಿದ್ದರು. ಭರತನಾಟ್ಯ ಕಲಾವಿದ ಶ್ರೀಪತಿ ಬಲ್ಲಾಳ್ ಅವರನ್ನು ಕಿಶೋರಿ ವಿವಾಹವಾಗಿದ್ದರು.

Stay up to date on all the latest ಸಿನಿಮಾ ಸುದ್ದಿ news with The Kannadaprabha App. Download now
facebook twitter whatsapp