ಕಿಚ್ಚ ಸುದೀಪ್ ಗೆ ದಾದಾ ಸಾಹೇಬ್ ಫಾಲ್ಕೆ ಭರವಸೆಯ ನಟ ಪ್ರಶಸ್ತಿ

ಸ್ಯಾಂಡಲ್ ವುಡ್, ಬಾಲಿವುಡ್ ಗಳೂ ಸೇರಿ ಭಾರತೀಯ ಚಿತ್ರರಂಗದಲ್ಲಿ ಹೆಸರಾಗಿರುವ ಕಿಚ್ಚ ಸುದೀಪ್ ಅವರಿಗೆ ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ ಪ್ರಶಸ್ತಿ ದೊರಕಿದೆ.  
ಕಿಚ್ಚ ಸುದೀಪ್
ಕಿಚ್ಚ ಸುದೀಪ್

ಸ್ಯಾಂಡಲ್ ವುಡ್, ಬಾಲಿವುಡ್ ಗಳೂ ಸೇರಿ ಭಾರತೀಯ ಚಿತ್ರರಂಗದಲ್ಲಿ ಹೆಸರಾಗಿರುವ ಕಿಚ್ಚ ಸುದೀಪ್ ಅವರಿಗೆ ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ ಪ್ರಶಸ್ತಿ ದೊರಕಿದೆ. 

ಕಳೆದ ಡಿಸೆಂಬರ್ ನಲ್ಲಿ ತೆರೆ ಕಂಡಿದ್ದ ಸಲ್ಮಾನ್ ಖಾನ್ ಅಭಿನಯದ  ‘ದಬಾಂಗ್​ 3’ ಚಿತ್ರದಲ್ಲಿನ ನಟನೆಗಾಗಿ ಸುದೀಪ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.  ಫೆ.20ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುದೀಪ್ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ನಟ ಗೆಳೆಯರು, ಕುಟುಂಬ ಸದಸ್ಯರು, ಮಾದ್ಯಮ ಮಿತ್ರರು ಸೇರಿ ಎಲ್ಲರಿಗೆ ಧನ್ಯವಾದ ಹೇಳಿದ್ದಾರೆ.

'ದಬಾಂಗ್ 3' ಚಿತ್ರದಲ್ಲಿ ಸುದೀಪ್ ಸಲ್ಮಾನ್ ಖಾನ್ ಎದುರಾಳಿಯಾಗಿ ಕಾಣಿಸಿಕೊಂಡಿದ್ದರು. ಚಿತ್ರಕ್ಕೆ ನಿರ್ದೇಶಕ ಪ್ರಭುದೇವ ಆಕ್ಷನ್ ಕಟ್ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com