ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಸುನಿಲ್ ಪುರಾಣಿಕ್ ಅಧಿಕಾರ ಸ್ವೀಕಾರ

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಟ ಸುನಿಲ್ ಪುರಾಣಿಕ್ ಅಧಿಕಾರ ಸ್ವೀಕರಿಸಿದ್ದಾರೆ
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಸುನಿಲ್ ಪುರಾಣಿಕ್ ಅಧಿಕಾರ ಸ್ವೀಕಾರ
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಸುನಿಲ್ ಪುರಾಣಿಕ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಟ ಸುನಿಲ್ ಪುರಾಣಿಕ್ ಅಧಿಕಾರ ಸ್ವೀಕರಿಸಿದ್ದಾರೆ

ನಗರದ ನಂದಿನಿ ಲೇಔಟ್ ನಲ್ಲಿರುವ ಅಕಾಡೆಮಿಯ ಕಚೇರಿಯಲ್ಲಿ ಈ ಅಧಿಕಾರ ಸ್ವೀಕಾರ ಕಾರ್ಯಕ್ರಮ ಗುರುವಾರ ಮಧ್ಯಾಹ್ನ ನೆರೆವೇರಿದೆ. ನಿರ್ದೇಶಕ, ಸಹ ನಿರ್ಮಾಪಕ, ನಟ ಸುನಿಲ್ ಪುರಾಣಿಕ್ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿ ಇಪ್ಪತ್ತೈದಕ್ಕೂ ಹೆಚ್ಚು ಚಿತ್ರಗಳಲ್ಲಿ ಪುರಾಣಿಕ್ ಅಭಿನಯಿಸಿದ್ದಾರೆ. ಅಲ್ಲದೆ ಕಿರುತೆರೆಯ ಕೆಲ ಧಾರಾವಾಹಿಗಳಲ್ಲಿ ಸಹ ನಟಿಸಿರುವ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ ಪುರಸ್ಕಾರಗಳು ಲಭಿಸಿದೆ.

ಚಿತ್ರೋದ್ಯಮದ ಬೆಳವಣಿಗೆಗೆ ಶ್ರಮಿಸುವೆ

ಅಧ್ಯಕ್ಷ ಸ್ಥಾನ ಸ್ವೀಕರಿಸಿದ ಬಳಿಕ ಮಾತನಾಡಿದ ಪುರಾಣಿಕ್ ಅಕಾಡೆಮಿಯು ಸರ್ಕಾರ ಹಾಗೂ ಚಿತ್ರೋದ್ಯಮದ ನಡುವಿನ ಸೇತುವೆಯಾಗಿದೆ. ಅಕಾಡೆಮಿಯ ಮಿತಿಯಲ್ಲಿ ಚಿತ್ರೋದ್ಯಮದ ಏಳ್ಗೆಗೆ ಶ್ರಮಿಸುತ್ತೇನೆ ಎಂದಿದ್ದಾರೆ.

ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವ ಮುಗಿಯುತ್ತಿದ್ದಂತೆ ತಟಸ್ಥವಾಗುವ ಅಕಾಡೆಮಿಯನ್ನು ವರ್ಷದ ಎಲ್ಲಾ ದಿನ ಸಕ್ರಿಯವಾಗುವಂತೆ ಂಆಡುವೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ಅಕಾಡೆಮಿ ಬೆಳವಣಿಗೆಗೆ ಪೂರಕ ಕ್ರ್ಮ ತೆಗೆದುಕೊಳ್ಳುವ ಭರವಸೆಯನ್ನು ಸಹ ನೂತನ ಅಧ್ಯಕ್ಷರು ವ್ಯಕ್ತಪಡಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com