ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಸ್ಮಾರಕ ಪ್ರತಿಷ್ಠಾನ ಸಮಿತಿ ರಚನೆ

ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಅಂಬರೀಷ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕನ್ನಡದ ಮೇರು ನಟರಾದ ಡಾ ರಾಜ್ ಕುಮಾರ್ ಮತ್ತು ಡಾ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನದಂತೆಯೇ, ಅಂಬರೀಷ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನಕ್ಕಾಗಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

Published: 07th January 2020 08:44 PM  |   Last Updated: 07th January 2020 08:44 PM   |  A+A-


ಅಂಬರೀಷ್

Posted By : Raghavendra Adiga
Source : UNI

ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಅಂಬರೀಷ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕನ್ನಡದ ಮೇರು ನಟರಾದ ಡಾ ರಾಜ್ ಕುಮಾರ್ ಮತ್ತು ಡಾ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನದಂತೆಯೇ, ಅಂಬರೀಷ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನಕ್ಕಾಗಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

ಪ್ರತಿಷ್ಠಾನಕ್ಕೆ ಆಡಳಿತಾತ್ಮಕ ನಿರ್ಣಯ, ರೂಪು ರೇಷೆ, ಅನುಷ್ಠಾನ ಹಾಗೂ ಕಾರ್ಯಕ್ರಮಗಳ ನಿರ್ವಹಣೆಗಳ ಪರಿಶೀಲನೆಗಾಗಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ 8 ಸದಸ್ಯರ ಅಂಬರೀಷ್ ಸ್ಮಾರಕ ಪ್ರತಿಷ್ಠಾನ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಅಥವಾ ನಿರ್ದೇಶಕರು, ಅಂಬರೀಷ್ ಅವರ ಪತ್ನಿ ಸುಮಲತ, ಅಂಬರೀಷ್ ಅವರ ಪುತ್ರ ಅಭಿಷೇಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಅಥವಾ ಅವರ ಪ್ರತಿನಿಧಿ, ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರು ಅಥವಾ ಅವರ ಪ್ರತಿನಿಧಿ ಸದಸ್ಯರಾಗಿರುವ ಈ ಸಮಿತಿಗೆ ಶ್ರೀ ಕಠೀರವ ಸ್ಟೂಡಿಯೋದ ವ್ಯವಸ್ಥಾಪಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. 

Stay up to date on all the latest ಸಿನಿಮಾ ಸುದ್ದಿ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp