ಎರಡನೇ ಮಗುವಿಗೆ ತಾಯಿಯಾದ ದ್ರೌಪದಿ ಪಾತ್ರಧಾರಿ ಸ್ನೇಹ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ `ಮುನಿರತ್ನ ಕುರುಕ್ಷೇತ್ರ’ ಚಿತ್ರದಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಿದ ನಟಿ ಸ್ನೇಹ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

Published: 25th January 2020 11:34 AM  |   Last Updated: 25th January 2020 11:34 AM   |  A+A-


Sneha

ಸ್ನೇಹ

Posted By : Shilpa D
Source : Online Desk

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ `ಮುನಿರತ್ನ ಕುರುಕ್ಷೇತ್ರ’ ಚಿತ್ರದಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಿದ ನಟಿ ಸ್ನೇಹ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ನಟಿ ಸ್ನೇಹ ಇಂದು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ಹೇಳಲಾಗುತ್ತಿದೆ. 

ಸ್ನೇಹ ಹಾಗೂ ಅವರ ಪತಿ ಪ್ರಸನ್ನ ಅವರಿಗೆ ಇದು ಎರಡನೇ ಮಗುವಾಗಿದ್ದು, ಈ ವಿಷಯವನ್ನು ಇನ್‍ಸ್ಟಾದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಸ್ನೇಹ ಅವರು ಸಾಂಪ್ರದಾಯಿಕವಾಗಿ ತಮ್ಮ ಸೀಮಂತ ಕಾರ್ಯಕ್ರಮವನ್ನು ಮಾಡಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಸ್ನೇಹ ಅವರ ಕುಟುಂಬಸ್ಥರು, ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಮಾತ್ರ ಭಾಗಿಯಾಗಿದ್ದರು.

ಮೇ 11, 2012ರಲ್ಲಿ ಸ್ನೇಹ ತಮ್ಮ ಗೆಳೆಯ ಪ್ರಸನ್ನ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2009ರಲ್ಲಿ ‘ಅಚಮಂಡು ಅಚಾಮುಂಡು’ ಚಿತ್ರದ ಚಿತ್ರೀಕರಣದ ವೇಳೆ ಇಬ್ಬರು ಪ್ರೀತಿಸಲು ಶುರು ಮಾಡಿದ್ದರು. 

ಮದುವೆಯಾಗಿ ಮೂರು ವರ್ಷಗಳ ನಂತರ ಸ್ನೇಹ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆ ಮಗುವಿಗೆ ‘ವಿಹಾನ್’ ಎಂದು ನಾಮಕರಣ ಮಾಡಿದ್ದರು. ಈಗ ಸ್ನೇಹ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಅಭಿಮಾನಿಗಳು ದಂಪತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp