ಕನ್ನಡ ಕಿರುತೆರೆ ನಟಿ ನವ್ಯಾ ಜೊತೆ ಅಭಿನಯಿಸಿದ್ದ ನಟನಿಗೂ ಕೊರೋನಾ!

ಕನ್ನಡದ ಕಿರುತೆರೆ ನಟಿ ನವ್ಯಾ ಸ್ವಾಮಿ ಕನ್ನಡದ ಜೊತೆಗೆ ತೆಲುಗಿನಲ್ಲೂ ಅಭಿನಯಿಸಿ ಖ್ಯಾತಿ ಗಳಿಸಿದ್ದಾರೆ. ಆದರೆ  ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಇದೀಗ ಅವರ ಜೊತೆ ಅಭಿನಯಿಸಿದ್ದ ನಟನೂ ಕೊರೋನಾಗೆ ತುತ್ತಾಗಿದ್ದಾರೆ.

Published: 04th July 2020 03:51 PM  |   Last Updated: 04th July 2020 05:34 PM   |  A+A-


Navya swamy-Ravi Krishna

ನವ್ಯಾ ಸ್ವಾಮಿ-ರವಿಕೃಷ್ಣ

Posted By : vishwanath
Source : Online Desk

ಕನ್ನಡದ ಕಿರುತೆರೆ ನಟಿ ನವ್ಯಾ ಸ್ವಾಮಿ ಕನ್ನಡದ ಜೊತೆಗೆ ತೆಲುಗಿನಲ್ಲೂ ಅಭಿನಯಿಸಿ ಖ್ಯಾತಿ ಗಳಿಸಿದ್ದಾರೆ. ಆದರೆ  ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಇದೀಗ ಅವರ ಜೊತೆ ಅಭಿನಯಿಸಿದ್ದ ನಟನೂ ಕೊರೋನಾಗೆ ತುತ್ತಾಗಿದ್ದಾರೆ.

ನವ್ಯಾ ಸ್ವಾಮಿ ಅವರು ತೆಲುಗಿನ ಆಮೆ ಕಥಾ ಧಾರಾವಾಹಿಯ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ದುರದೃಷ್ಟವಶಾತ್ ಅವರಿಗೆ ಕೊರೋನಾ ಸೋಂಕು ತಗುಲಿತ್ತು. 

ಇದೀಗ ಅವರ ಜೊತೆ ಅಭಿನಯಿಸಿದ್ದ ನಟ ರವಿಕೃಷ್ಣ ಅವರಿಗೂ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸದ್ಯಕ್ಕೆ ಧಾರಾವಾಹಿ ಶೂಟಿಂಗ್ ಅನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ.

ಕೊರೋನಾ ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ಹೈದರಾಬಾದ್ ನಲ್ಲಿ ಚಿತ್ರೀಕರಣ ಅನುವು ಮಾಡಿಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಲವು ಸಿನಿಮಾಗಳು ಹಾಗೂ ಧಾರಾವಾಹಿಗಳ ಚಿತ್ರೀಕರಣ ಭರದಿಂದ ಸಾಗಿತ್ತು.

ಮೈಸೂರು ಮೂಲದ ನಟಿ ಈ ಹಿಂದೆ ಕನ್ನಡದ ಲಕುಮಿ, ತಂಗಾಳಿ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದರು. ಆ ಬಳಿಕ ತಮಿಳು, ತೆಲುಗಿನಲ್ಲಿ ಅವಕಾಶ ಗಿಟ್ಟಿಸಿಕೊಂಡ ಕನ್ನಡತಿ ವಾಣಿ ರಾಣಿ, 'ನಾ ಪೇರು ಮೀನಾಕ್ಷಿ' ಮೂಲಕ ತಮಿಳು- ತೆಲುಗು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.


Stay up to date on all the latest ಸಿನಿಮಾ ಸುದ್ದಿ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp