‘ದಾರಿ ಯಾವುದಯ್ಯಾ ವೈಕುಂಠಕೆ' ಚಿತ್ರೀಕರಣ ‌ಪೂರ್ಣ

ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ 'ದಾರಿ ಯಾವುದಯ್ಯಾ ವೈಕುಂಠಕ್ಕೆ' ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ.

Published: 08th July 2020 02:00 AM  |   Last Updated: 08th July 2020 02:00 AM   |  A+A-


AnushaVardhan1

ಅನುಷ, ವರ್ಧನ್ ತೀರ್ಥಹಳ್ಳಿ

Posted By : Nagaraja AB
Source : UNI

ಬೆಂಗಳೂರು: ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ 'ದಾರಿ ಯಾವುದಯ್ಯಾ ವೈಕುಂಠಕ್ಕೆ' ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ.

ಲಾಕ್ ಡೌನ್ ತೆರವಿನ ನಂತರ ಸರ್ಕಾರ ಅರ್ಧ ಭಾಗ ಚಿತ್ರೀಕರಣವಾಗಿರುವ ಚಿತ್ರಗಳ ಚಿತ್ರೀಕರಣ ಪೂರ್ಣ ಮಾಡಲು ಅನುಮತಿ ನೀಡಿದ್ದು. ಸರ್ಕಾರದ ನಿಯಮಗಳನ್ನು ಪಾಲಿಸಿ ಬೆಂಗಳೂರಿನಲ್ಲಿ ಕೊನೆಯ ಹಂತದ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ವರ್ಧನ್, ಅನುಷ ಬಲ ರಾಜವಾಡಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸದ್ಯದಲ್ಲೇ ಚಿತ್ರೀಕರಣ ನಂತರದ ಚಟುವಟಿಕೆ ಪ್ರಾರಂಭವಾಗಲಿದೆ. ಈ ಹಿಂದೆ 'ಕೃಷ್ಣ ಗಾರ್ಮೆಂಟ್ಸ್' ಚಿತ್ರ ನಿರ್ದೇಶಿಸಿದ್ದ ಸಿದ್ದು ಪೂರ್ಣಚಂದ್ರ ಈ ಚಿತ್ರದ ನಿರ್ದೇಶಕರು.ವರ್ಧನ್ ತೀರ್ಥಹಳ್ಳಿ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಅನುಷ. 'ಡಿಂಗ' ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ಅನುಷ ಅವರು ಶ್ರೀಮಾನ್ ಶ್ರೀಮತಿ ಹಾಗೂ ಅವಳು ಸುಜಾತ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. 

'ತಿಥಿ' ಚಿತ್ರದ ಖ್ಯಾತಿಯ ಪೂಜಾ,  ಬಲ ರಾಜವಾಡಿ, ಶೀಬಾ, ಡಿ.ವಿ.ನಾಗರಾಜ್, ಸುಚಿತ್,  ಅರುಣ್  ಮೂರ್ತಿ, ಸಂಗೀತ, ಗೌಡಿ, ಸಿದ್ಧಾರ್ಥ್, ಪ್ರಣಯ್ ಮೂರ್ತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ಭಗತ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಿತಿನ್ ಛಾಯಾಗ್ರಹಣ ಹಾಗೂ ಮುತ್ತುರಾಜ್ ಸಂಕಲನವಿದೆ.

Stay up to date on all the latest ಸಿನಿಮಾ ಸುದ್ದಿ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp