ಓರ್ವ ನಟನಾಗಿ ನಿರ್ಮಾಪಕ ಮುನಿರತ್ನಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದರಲ್ಲಿ ತಪ್ಪಿಲ್ಲ: ನಿಖಿಲ್ ಗೌಡ ಸ್ಪಷ್ಟನೆ

ನಿರ್ಮಾಪಕ ಹಾಗೂ ರಾಜಕಾರಣಿ ಮುನಿರತ್ನ ಅವರ ಹುಟ್ಟುಹಬ್ಬಕ್ಕೆ ಜೆಡಿಎಸ್‌ ಯುವ ನಾಯಕ ನಿಖಿಲ್ ಗೌಡ ಶುಭಾಶಯ ಕೋರಿದ್ದಕ್ಕೆ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿಲ್ ಗೌಡ ಫೇಸ್‌ಬುಕ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

Published: 25th July 2020 11:32 AM  |   Last Updated: 25th July 2020 01:21 PM   |  A+A-


Munirathna-Nikhil Gowda

ನಿಖಿಲ್ ಗೌಡ ಮತ್ತು ಮುನಿರತ್ನ

Posted By : Srinivasamurthy VN
Source : UNI

ಬೆಂಗಳೂರು: ನಿರ್ಮಾಪಕ ಹಾಗೂ ರಾಜಕಾರಣಿ ಮುನಿರತ್ನ ಅವರ ಹುಟ್ಟುಹಬ್ಬಕ್ಕೆ ಜೆಡಿಎಸ್‌ ಯುವ ನಾಯಕ ನಿಖಿಲ್ ಗೌಡ ಶುಭಾಶಯ ಕೋರಿದ್ದಕ್ಕೆ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿಲ್ ಗೌಡ ಫೇಸ್‌ಬುಕ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಸೃಜನಶೀಲ ನಿರ್ಮಾಪಕರು ಮತ್ತು ಆತ್ಮೀಯರು ಆದ ಶ್ರೀ ಮುನಿರತ್ನ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು

Posted by Nikhil Gowda on Thursday, July 23, 2020

" ಮುನಿರತ್ನ ಅವರ ಹುಟ್ಟಹಬ್ಬಕ್ಕೆ ಶುಭ ಕೋರಿದ್ದಕ್ಕೆ ಹಲವರು ಆಕ್ಷೇಪಿಸಿರುವುದು ನನ್ನ ಗಮನಕ್ಕೆ ಬಂತು. 'ಕುಮಾರಸ್ವಾಮಿ ಅವರಿಗೆ ದ್ರೋಹ ಬಗೆದವರಿಗೆ ನೀವು ಶುಭಕೋರಬಾರದಿತ್ತು‘ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಎಲ್ಲರ ಅಭಿಪ್ರಾಯಗಳನ್ನೂ ಗೌರವಿಸುತ್ತೇನೆ. ನಿರ್ಮಾಪಕನಿಗೆ ನಟನಾಗಿ ನಾನು ಶುಭಕೋರಿದ್ದೇನೇ ಹೊರತು ಯುವ ಜನತಾದಳ ನಾಯಕನಾಗಿ ಅಲ್ಲ ಎಂದು ನಿಖಿಲ್ ಹೇಳಿದ್ದಾರೆ.

ರಾಜಕೀಯ ಸಂಘರ್ಷಗಳನ್ನು ಮೀರಿ ದೇವೇಗೌಡರು ಮೋದಿ ಅವರಿಗೆ ಶುಭ ಕೋರುತ್ತಾರೆ. ಮೋದಿ ದೇವೇಗೌಡರಿಗೆ ಶುಭ ಕೋರುತ್ತಾರೆ. ಯಡಿಯೂರಪ್ಪನವರು ಕುಮಾರಸ್ವಾಮಿ ಅವರಿಗೆ ಶುಭ ಆಶಿಸುತ್ತಾರೆ. ಕುಮಾರಸ್ವಾಮಿ ಅವರೂ ಶುಭಾರೈಕೆಗಳನ್ನು ತಿಳಿಸುತ್ತಾರೆ. ಇದು ಕರ್ನಾಟಕದ ರಾಜಕೀಯದ ಸತ್ಸಂಪ್ರದಾಯ. ಹೀಗಾಗಿ ನನ್ನ ಶುಭಕೋರಿಕೆಯಲ್ಲಿ ತಪ್ಪಿರದು ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಹೆಚ್‌.ಡಿ. ಕುಮಾರಸ್ವಾಮಿ ಅವರ ಸರ್ಕಾರವನ್ನು ಉರುಳಿಸುವಲ್ಲಿ ರಾಜರಾಜೇಶ್ವರಿ ನಗರದ ಅಂದಿನ ಕಾಂಗ್ರೆಸ್ ಶಾಸಕ ಮುನಿರತ್ನ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಇವರ ಹುಟ್ಟುಹಬ್ಬಕ್ಕೆ ನಿಖಿಲ್‌ ಕುಮಾರಸ್ವಾಮಿ ಶುಭ ಕೋರಿದ ಪ್ರಸಂಗ ಅನೇಕ ಜೆಡಿಎಸ್ ‌ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.

ಮುನಿರತ್ನ ಅವರ ಹುಟ್ಟಹಬ್ಬಕ್ಕೆ ಶುಭ ಕೋರಿದ್ದಕ್ಕೆ ಹಲವರು ಆಕ್ಷೇಪಿಸಿರುವುದು ನನ್ನ ಗಮನಕ್ಕೆ ಬಂತು. 'ಕುಮಾರಸ್ವಾಮಿ ಅವರಿಗೆ ದ್ರೋಹ ಬಗೆದವರಿಗೆ...

Posted by Nikhil Gowda on Friday, July 24, 2020
Stay up to date on all the latest ಸಿನಿಮಾ ಸುದ್ದಿ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp