ಅಯ್ಯಪ್ಪನುಂ-ಕೋಶಿಯುಂ ಮಲಯಾಳಂ ಸಿನಿಮಾ ನಿರ್ದೇಶಕ ಸಚ್ಚಿ ಇನ್ನಿಲ್ಲ 

ಮಲಯಾಳಂ ಚಿತ್ರರಂಗದ  ಪ್ರತಿಭಾವಂತ ನಿರ್ದೇಶಕ ಕೆ. ಆರ್.ಸಚ್ಚಿದಾನಂದ್ ಅಲಿಯಾಸ್ ಸಚ್ಚಿ ಜೂನ್ 18ರಂದು ನಿಧನರಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚ್ಚಿ ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ, ಮತ್ತೊಮ್ಮೆ ತೀವ್ರ ಹೃದಯ ಸ್ತಂಬನವಾಗಿ ಮೃತಪಟ್ಟಿದ್ದಾರೆ.

Published: 19th June 2020 08:16 AM  |   Last Updated: 19th June 2020 12:18 PM   |  A+A-


KR sachidanad

ಕೆ ಆರ್ ಸಚಿದಾನಂದ

Posted By : Shilpa D
Source : The New Indian Express

ತ್ರಿಶೂರ್: ಮಲಯಾಳಂ ಚಿತ್ರರಂಗದ  ಪ್ರತಿಭಾವಂತ ನಿರ್ದೇಶಕ ಕೆ. ಆರ್.ಸಚ್ಚಿದಾನಂದ್ ಅಲಿಯಾಸ್ ಸಚ್ಚಿ ಜೂನ್ 18ರಂದು ನಿಧನರಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚ್ಚಿ ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ, ಮತ್ತೊಮ್ಮೆ ತೀವ್ರ ಹೃದಯ ಸ್ತಂಬನವಾಗಿ ಮೃತಪಟ್ಟಿದ್ದಾರೆ.

ಅಯ್ಯಪ್ಪನುಂ-ಕೋಶಿಯುಂ ಎಂಬ ಸೂಪರ್ ಹಿಟ್ ಚಿತ್ರವಲ್ಲದೆ ಅನಾರ್ಕಲಿ ಎಂಬ ಪ್ರೇಮ ಕಥೆಯನ್ನು ನಿರ್ದೇಶಿಸಿದ್ದರು. ಸಮಾಜಕ್ಕೆ ಸಂದೇಶ ಸಾರುವ ಡ್ರೈವಿಂಗ್ ಲೈಸನ್ಸ್ ಕೂಡಾ ಸಚ್ಚಿಯ ಕೈಚಳಕ ಹೊಂದಿತ್ತು. ಹೃದಯಸ್ಪರ್ಶಿ ಕಥೆಗಾರ, ನಿರ್ದೇಶಕ ಸಚ್ಚಿದಾನಂದ ಇನ್ನು ನೆನಪು ಮಾತ್ರ ತ್ರಿಶೂರಿನ ಜ್ಯುಬಿಲಿ ಮಿಷನ್ ಆಸ್ಪತ್ರೆಯಲ್ಲಿ ನಿಧನರಾದ 48 ವರ್ಷ ವಯಸ್ಸಿನ ಸಚ್ಚಿ ಅವರು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. 

ವಕೀಲ, ಕವಿ, ರಂಗಭೂಮಿ ಕಲಾವಿದ, ಕಥೆಗಾರ, ಸಂಭಾಷಣೆಗಾರ, ನಿರ್ದೇಶಕ,  ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಸಚ್ಚಿ ಬಹುಮುಖ ಪ್ರತಿಭೆಯಾಗಿದ್ದರು. ಕೇರಳ ಹೈಕೋರ್ಟಿನಲ್ಲಿ 8 ವರ್ಷಗಳ ಕಾಲ ಕ್ರಿಮಿನಲ್ ಲಾಯರ್ ಆಗಿದ್ದರು. ಎರಡು ಮೂರು ದಿನಗಳ  ಹಿಂದೆ ಸೊಂಟದ ಭಾಗದಲ್ಲಿ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ, ನಂತರ ಚೇತರಿಸಿಕೊಳ್ಳಲಿಲ್ಲ ಎಂದು ತಿಳಿದು ಬಂದಿದೆ. 

ಸಚ್ಚಿ ಅವರ ಮೆದುಳಿಗೂ ರಕ್ತ ಪೂರೈಕೆ ಸ್ಥಗಿತವಾಗಿ ಸಮಸ್ಯೆ ಎದುರಾಗಿತ್ತು. ಕಳೆದೆರಡು ದಿನಗಳಿಂದ ವೆಂಟಿಲೇಟರ್ ನೆರವಿನಲ್ಲಿ ಉಸಿರಾಟ ನಡೆಸಿದ್ದರು.

Stay up to date on all the latest ಸಿನಿಮಾ ಸುದ್ದಿ news
Poll
Rohit Sharma

ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾದ ಸಾಧನೆಯ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp