ಮಾ.16ಕ್ಕೆ 'ವೀರಂ' ಚಿತ್ರೀಕರಣ ಆರಂಭ: ವಿಷ್ಣು ಅಭಿಮಾನಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಪ್ರಜ್ವಲ್ ದೇವರಾಜ್

ಖಾದರ್ ಕುಮಾರ್ ಅವರ ಚೊಚ್ಚಲ ನಿರ್ದೇಶನದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರುವ ವೀರಂ ಚಿತ್ರದ ಚಿತ್ರೀಕರಣ ಮಾರ್ಚ್ 16ರಿಂದ ಆರಂಭಗೊಳ್ಳಲಿದ್ದು, ಚಿತ್ರದಲ್ಲಿ ಪ್ರಜ್ವಲ್ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. 

Published: 04th March 2020 12:36 PM  |   Last Updated: 04th March 2020 12:58 PM   |  A+A-


Prajwal Devaraj’s 'Veeram' to begin shoot from March 16

ಮಾ.16ಕ್ಕೆ 'ವೀರಂ' ಚಿತ್ರೀಕರಣ ಆರಂಭ

Posted By : manjula
Source : The New Indian Express

ಖಾದರ್ ಕುಮಾರ್ ಅವರ ಚೊಚ್ಚಲ ನಿರ್ದೇಶನದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರುವ ವೀರಂ ಚಿತ್ರದ ಚಿತ್ರೀಕರಣ ಮಾರ್ಚ್ 16ರಿಂದ ಆರಂಭಗೊಳ್ಳಲಿದ್ದು, ಚಿತ್ರದಲ್ಲಿ ಪ್ರಜ್ವಲ್ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. 

ಕಮರ್ಷಿಯಲ್ ಎಂಟರ್'ಟೇನರ್ ಆಗಿರುವ ಈ ಚಿತ್ರದಲ್ಲಿ ರಚಿತಾ ರಾಮ್ ಅವರು ನಾಯಕ ನಟಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರವನ್ನು ವಿಷ್ಣು ಅಭಿಮಾನಿಯಾಗಿರುವ ಖಾದರ್ ಕುಮಾರ್ ಅವರು ನಿರ್ದೇಶಿಸುತ್ತಿದ್ದಾರೆ. 

ಡಾಟರ್ ಆಫ್ ಪಾರ್ವತಮ್ಮ ಚಿತ್ರದ ನಿರ್ಮಾಮಕ ಶಶಿಧರ್ ಅವರು ಚಿತ್ರವನ್ನು ನಿರ್ಮಿಸುತ್ತಿದ್ದು, ಶೀರ್ಷಿಕೆ ಹೇಳುವಂತೆಯೇ ಇದೊಂದು ಪಕ್ಕಾ ಮಾಸ್ ಚಿತ್ರವಾಗಿದೆ. ಈ ಹಿಂದೆ ವಿಷ್ಣುವರ್ಧನ್ ಅವರ ಹುಟ್ಟುಹಬ್ಬದಂದೇ ಚಿತ್ರದ ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ವೀರಂ ಚಿತ್ರದಲ್ಲಿ ನಾಯಕ ಪ್ರಜ್ವಲ್ ಅವರು ವಿಷ್ಣುವರ್ಧನ್ ಅವರ ಅಭಿಮಾನಿಯಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ವಿಷ್ಣುವರ್ಧನ್ ಅವರ ಜನ್ಮದಿನದಂದೇ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಲಾಂಚ್ ಮಾಡಲಾಗಿತ್ತು. 

Stay up to date on all the latest ಸಿನಿಮಾ ಸುದ್ದಿ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp