ತಿಳುವಳಿಕೆ ಇಲ್ಲದ ಸಂದೇಶಗಳನ್ನು ಹರಡಬೇಡಿ: ಕಿಚ್ಚಾ ಸುದೀಪ್ ಗೆ ಚೇತನ್ ಬುದ್ಧಿವಾದ

ಕೊರೋನಾ ವೈರಸ್ ವಿರುದ್ಧ ಶ್ರಮಿಸುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸುವ ಸಲುವಾಗಿ ಜನತಾ ಕರ್ಫ್ಯೂದಂದು ಚಪ್ಪಾಳೆ ತಟ್ಟುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದು ಇದನ್ನು ಬೆಂಬಲಿಸಿ ಕಿಚ್ಚ ಸುದೀಪ್ ಮಾಡಿದ್ದ ಟ್ವೀಟ್ ಗೆ ನಟ ಚೇತನ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Published: 23rd March 2020 10:26 PM  |   Last Updated: 23rd March 2020 10:26 PM   |  A+A-


Kichcha Sudeep-Chetan

ಸುದೀಪ್-ಚೇತನ್

Posted By : Vishwanath S
Source : Online Desk

ಬೆಂಗಳೂರು: ಕೊರೋನಾ ವೈರಸ್ ವಿರುದ್ಧ ಶ್ರಮಿಸುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸುವ ಸಲುವಾಗಿ ಜನತಾ ಕರ್ಫ್ಯೂದಂದು ಚಪ್ಪಾಳೆ ತಟ್ಟುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದು ಇದನ್ನು ಬೆಂಬಲಿಸಿ ಕಿಚ್ಚ ಸುದೀಪ್ ಮಾಡಿದ್ದ ಟ್ವೀಟ್ ಗೆ ನಟ ಚೇತನ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. 

ಸುದೀಪ್ ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದು ಭಾನುವಾರ ಸಂಜೆ 5 ಗಂಟಗೆ ಎಲ್ಲರೂ ಚಪ್ಪಾಳೆ ತಟ್ಟಲು ದಯವಿಟ್ಟು ಭಾಗವಹಿಸಿ. ಹೀಗೆ ಮಾಡಿದರೆ ನಾವು ಯಾವುದನ್ನಾದರೂ ಕಳೆದುಕೊಳ್ಳುತ್ತೇವೆಯೇ? ಇಲ್ಲವಲ್ಲ. ನಾವು ಗಳಿಸುತ್ತೇವೆಯೋ? ಬಹುಶಃ ಗಳಿಸಬಹುದು. ಆದರೆ ಕನಿಷ್ಠ ಪ್ರಯತ್ನಿಸೋಣ. ಎಲ್ಲವನ್ನೂ ಆಮೇಲೆ ಯೋಚಿಸೋಣ. ಇದು ನಮ್ಮ ಜೀವನಕ್ಕಾಗಿ ಎಂದು ಬರೆದುಕೊಂಡಿದ್ದರು. 

ಇದಕ್ಕೆ ಚೇತನ್ ಖಾರವಾಗಿ ಪ್ರತಿಕ್ರಿಯಿಸಿದ್ದು ಸುದೀಪ್ ಸರ್. ಚಿತ್ರರಂಗದಲ್ಲಿ ನಿಮ್ಮ ಕೆಲಸವನ್ನು ನಾನು ಗೌರವಿಸುತ್ತೇನೆ. ವೈದ್ಯ ದಂಪತಿಯ ಮಗನಾಗಿ ನಮ್ಮ ವೈದ್ಯಕೀಯ ಸಿಬ್ಬಂದಿಯನ್ನು ಪ್ರಶಂಸಿಸಬೇಕು ಎಂಬುದನ್ನು ನಾವು ಒಪ್ಪುತ್ತೇನೆ. ಆದರೆ ಮೂಢನಂಬಿಕೆ ಮತ್ತು ತಪ್ಪು ಮಾಹಿತಿಯ ಹಾದಿಯಲ್ಲಿ ನಮ್ಮನ್ನು ಕೊಂಡೊಯ್ಯುವ ಇಂತಹ ಅವೈಜ್ಞಾನಿಕ ಎನರ್ಜಿ ಮೆಡಿಸಿನ್ ಸಿದ್ಧಾಂತಗಳನ್ನು ಹರಡುವುದರ ಮೂಲಕ ವೈದ್ಯರನ್ನು ಪ್ರಶಂಸಿಸುವುದು ಸರಿಯಲ್ಲ. ವಿಜ್ಞಾನದ ಮೂಲಕ ಕೊರೋನಾ ವೈರಸ್ ವಿರುದ್ಧ ಹೋರಾಡೋಣ ಎಂದು ಟ್ವೀಟ್ ಮಾಡಿದ್ದಾರೆ. 

Stay up to date on all the latest ಸಿನಿಮಾ ಸುದ್ದಿ news
Poll
school

ರಾಷ್ಟ್ರೀಯ ಶಿಕ್ಷಣ ನೀತಿ-2020: 5 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಕಲಿಸುವ ಪ್ರಸ್ತಾಪವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp