ಖ್ಯಾತ ತೆಲುಗು ನಟ ಶಿವಾಜಿ ರಾಜ ಆಸ್ಪತ್ರೆಗೆ ದಾಖಲು

ತೆಲುಗು ಸಿನಿರಂಗದ ಖ್ಯಾತ ನಟ ಶಿವಾಜಿರಾಜ ಅವರು ಅನಾರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಟ ಶಿವಾಜಿರಾಜ
ನಟ ಶಿವಾಜಿರಾಜ

ಹೈದರಾಬಾದ್: ತೆಲುಗು ಸಿನಿರಂಗದ ಖ್ಯಾತ ನಟ ಶಿವಾಜಿರಾಜ ಅವರು ಅನಾರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಿವಾಜಿರಾಜ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ತುರ್ತು ನಿಗಾ ಘಟಕದಲ್ಲಿ ಶಿವಾಜಿರಾಜ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರ ಸ್ನೇಹಿತ ಸುರೇಶ್  ಎಂಬುವವರು, ಇಂದು ಬೆಳಗ್ಗೆ ಅವರ ರಕ್ತದೊತ್ತಡ ಕಡಿಮೆಯಾಗಿ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಇದೀಗ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗತ್ತಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com