ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ ಸೀಸನ್ 4ರ ವಿಜೇತೆ ಅಪಘಾತದಲ್ಲಿ ಸಾವು

ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಖ್ಯಾತ ರಿಯಾಲಿಟಿ ಶೋ ‘ಪ್ಯಾಟೆ  ಹುಡ್ಗೀರ್ ಹಳ್ಳಿ ಲೈಫ್’ ಸೀಸನ್ 4 ವಿಜೇತೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Published: 27th May 2020 07:38 AM  |   Last Updated: 27th May 2020 12:26 PM   |  A+A-


mebiena micheal dies in Accident

ಮೆಬಿನಾ ಮೈಕಲ್ (ಸಂಗ್ರಹ ಚಿತ್ರ)

Posted By : Srinivasamurthy VN
Source : Online Desk

ಮಂಡ್ಯ: ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಖ್ಯಾತ ರಿಯಾಲಿಟಿ ಶೋ ‘ಪ್ಯಾಟೆ  ಹುಡ್ಗೀರ್ ಹಳ್ಳಿ ಲೈಫ್’ ಸೀಸನ್ 4 ವಿಜೇತೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪ್ಯಾಟೆ  ಹುಡ್ಗೀರ್ ಹಳ್ಳಿ ಲೈಫ್ ಖ್ಯಾತಿಯ ಮೆಬಿನಾ ಮೈಕಲ್ ನಿನ್ನೆ ಸಂಜೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿನ್ನೆ ಸಂಜೆ 4.30ರ ವೇಳೆಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ತೆರಳುತ್ತಿದ್ದ  ಸಂದರ್ಭದಲ್ಲಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 

ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಆದಿಚುಂಚನಗಿರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಈ ವೇಳೆ ಮಾರ್ಗ  ಮಧ್ಯೆ ಮೆಬಿನಾ ಸಾವನ್ನಪ್ಪಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಬೆಂಗಳೂರಿನಿಂದ ಸೋಮವಾರಪೇಟೆಗೆ ಕೆಎ 02 ಎಎಫ್ 4796 ಸಂಖ್ಯೆಯ ಕಾರು ತೆರಳುತ್ತಿತ್ತು. ಹಾಸನ ಕಡೆಯಿಂದ ಯೂಟರ್ನ್ ಆಗುತ್ತಿದ್ದ ಟ್ರ್ಯಾಕ್ಟರಿಗೆ ಕಾರು ಡಿಕ್ಕಿಯಾಗಿದ್ದು, ಈ ವೇಳೆ. ಕಾರಿನಲ್ಲಿದ್ದವರನ್ನು ರಿಯಾಲಿಟಿ ಶೋ ಕಾರ್ಯಕ್ರಮದ ತಂಡದವರು  ಎನ್ನಲಾಗಿದೆ. ಮೇಬಿನಾ ಸೇರಿದಂತೆ ಮೂವರು ಕೊಡಗಿನ ಸೋಮವಾರಪೇಟೆಗೆ ತೆರಳುತ್ತಿದ್ದರು ಎಂಬ ಮಾಹಿತಿ ಲಭಿಸಿದೆ. ಬೆಳ್ಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪ್ಯಾಟೆ ಹುಡ್ಗೀರು ಹಳ್ಳಿ ಲೈಫು ರಿಯಾಲಿಟಿ ಶೋ 4ರ ವಿನ್ನರ್ ಆಗಿ ಮೆಬಿನಾ ಹೊರ ಹೊಮ್ಮಿದ್ದರು. ರಿಯಾಲಿಟಿ  ಶೋ ವಿನ್ನರ್ ಆಗಿ 7 ಲಕ್ಷ ರೂ. ಬಹುಮಾನ ಪಡೆದಿದ್ದರು. 

Stay up to date on all the latest ಸಿನಿಮಾ ಸುದ್ದಿ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp