ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ರಾಗಿಣಿ ದ್ವಿವೇದಿ ಅರ್ಜಿ

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನಲ್ಲಿ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಬೆನ್ನು ನೋವಿನ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅನುಮತಿ ಕೋರುವಂತೆ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ರಾಗಿಣಿ ದ್ವಿವೇದಿ
ರಾಗಿಣಿ ದ್ವಿವೇದಿ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನಲ್ಲಿ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಬೆನ್ನು ನೋವಿನ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅನುಮತಿ ಕೋರುವಂತೆ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ಕಕ್ಷಿದಾರರು ತೀವ್ರ ಬೆನ್ನುನೋವುದಿಂದ ನರಳುತ್ತಿದ್ದು, ಬೆಂಗಳೂರು ಕೇಂದ್ರ ಕಾರಾಗೃಹ ಆಸ್ಪತ್ರೆಯಲ್ಲಿ ಸಹಾಯವಾಗುತ್ತಿಲ್ಲ. ಉತ್ತಮ ಚಿಕಿತ್ಸೆ ಲಭ್ಯವಿರುವಂತಹ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕೆಂದು ರಾಗಿಣಿ ದ್ವಿವೇದಿ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಆರೋಪಿ ತನ್ನ ಕುಟುಂಬದವರು ಹಾಗೂ ಆಕೆಯ ವಕೀಲರನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಎಂದು ವಕೀಲರು ಕೋರಿದ್ದಾರೆ. ಅಲ್ಲದೇ, ಆಕೆಯ ಮನೆಯ ಶೋಧ ವೇಳೆ ವಶಪಡಿಸಿಕೊಂಡಿರುವ ಟ್ಯಾಬ್ಲೆಟ್ ಕಂಪ್ಯೂಟರ್ ಮತ್ತು ಪೆನ್ ಡ್ರೈವ್ ನ್ನು ಕುಟುಂಬ ಸದಸ್ಯರಿಗೆ ವಾಪಸ್ ನೀಡಲು ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಮತ್ತೊಂದು ಅರ್ಜಿಯನ್ನು ಸಲ್ಲಿಸಲಾಗಿದೆ.

ಆಕ್ಷೇಪ ಇದ್ದಲ್ಲಿ ಸಲ್ಲಿಸುವಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗೆ ಸೂಚಿಸಿದ ನಂತರ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿತು.ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಸೆಪ್ಟೆಂಬರ್ 4 ರಂದು ಬಂಧನಕ್ಕೀಡಾಗಿದ್ದ ನಟಿ ರಾಗಿಣಿ ದ್ವಿವೇದಿ ಸೆಪ್ಟೆಂಬರ್ 14 ರಿಂದ ಜೈಲಿನಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com