ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ಹೊಸ ಚಿತ್ರಕ್ಕೆ ಭಾರಿ ಸಂಭಾವನೆ ಪಡೆದ ರಶ್ಮಿಕಾ ಮಂದಣ್ಣ

ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿರುವ ರಶ್ಮಿಕಾ ಮಂದಣ್ಣ, ಭಾರಿ ಸಂಭಾವನೆಗಾಗಿ ಮತ್ತೆ ಸುದ್ದಿಯಾಗಿದ್ದಾರೆ.

ಹೈದರಾಬಾದ್: ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿರುವ ರಶ್ಮಿಕಾ ಮಂದಣ್ಣ, ಭಾರಿ ಸಂಭಾವನೆಗಾಗಿ ಮತ್ತೆ ಸುದ್ದಿಯಾಗಿದ್ದಾರೆ.

ಇತ್ತೀಚಿಗಷ್ಟೆ ತೆಲುಗಿನಲ್ಲಿ ಹೊಸ ಸಿನಿಮಾ ‘ಆಡಲ್ಲು ಮೀಕು ಜೋಹರ್ಲು’ ಚಿತ್ತ್ರಕ್ಕೆ ರಶ್ಮಿಕಾ ಮಂದಣ್ಣ ಸಹಿ ಮಾಡಿದ್ದು, ಚಿತ್ರ ಅಧಿಕೃತವಾಗಿ ತಿರುಮಲದಲ್ಲಿ ಮುಹೂರ್ತ ಮುಗಿಸಿ ಸೆಟ್ಟೇರಿದೆ. ಈ ಚಿತ್ರಕ್ಕಾಗಿ ರಶ್ಮಿಕಾ ಭಾರಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಸಂಭಾವನೆಯ ಮೊತ್ತ ಇಂತಿಷ್ಟೇ ಎಂಬ ಮಾಹಿತಿ ಹೊರಬಂದಿಲ್ಲವಾದರೂ ತೆಲುಗಿನಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳನ್ನೇ ನೀಡುತ್ತಿರುವ ರಶ್ಮಿಕಾಗೆ ಒಂದು ಕೋಟಿಗೂ ಅಧಿಕ ಸಂಭಾವನೆ ನೀಡಲು ನಿರ್ಮಾಪಕರು ಸಿದ್ಧರಾಗಿದ್ದಾರಂತೆ. 

ತೆಲುಗು ನಟ ಶಾರ್ವಾನಂದ್ ನಾಯಕರಾಗಿರುವ ಈ ಚಿತ್ರಕ್ಕೆ ಮೊದಲು ನಟಿ ಸಾಯಿ ಪಲ್ಲವಿ ಆಯ್ಕೆಯಾಗಿದ್ದರು. ಶರ್ವಾನಂದ್ ಜೊತೆ ಪ್ರೇಮಂ ಸುಂದರಿ ನಟಿಸುವುದು ಬಹುತೇಕ ಖಚಿತವಾಗಿತ್ತು. ಆದರೆ ಕೊನೆಕ್ಷಣದಲ್ಲಿ ಸಾಯಿ ಪಲ್ಲವಿ ಸಿನಿಮಾದಿಂದ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಯಿ ಪಲ್ಲವಿ ಜಾಗಕ್ಕೆ ನಟಿ ರಶ್ಮಿಕಾ ಮಂದಣ್ಣ ಆಯ್ಕೆಯಾಗಿದ್ದಾರೆ.

ಮೊದಲ ಬಾರಿಗೆ ರಶ್ಮಿಕಾ ಶರ್ವಾನಂದ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಪ್ರಾರಂಭವಾಗಲಿದ್ದು, ವರ್ಷದ ಕೊನೆಯಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಕಿಶೋರ್ ತಿರುಮಲ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com