ಡ್ರಗ್ಸ್ ದಂಧೆ: ಸಿಸಿಬಿ ನೋಟಿಸ್ ಭೀತಿ ಹಿನ್ನೆಲೆ ರಾಜ್ಯ ತೊರೆದ ಕನ್ನಡದ ಹೆಸರಾಂತ ನಟಿ!

ಡ್ರಗ್ಸ್ ದಂಧೆ ಕುರಿತಂತೆ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಹೆಸರಾಂತ ನಟಿ ರಾಜ್ಯ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಡ್ರಗ್ಸ್ ದಂಧೆ ಕುರಿತಂತೆ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಹೆಸರಾಂತ ನಟಿ ರಾಜ್ಯ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. 

15 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದು ಹಲವು ಸೂಪರ್ ಹಿಟ್ ಚಿತ್ರಗಳನ್ನೂ ನೀಡಿದ್ದಾರೆ. ಸದ್ಯ ಆ ನಟಿಗೆ ಬೇಡಿಗೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಾಗಿ ಸೆಲೆಬ್ರಿಟಿ ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ. 

ನಟಿ ರಾಗಿಣಿಗೂ ಮುನ್ನ ಈ ನಟಿಗೆ ಸಿಸಿಬಿ ನೋಟಿಸ್ ನೀಡುವ ಸಾಧ್ಯತೆ ಇತ್ತು. ಆದರೆ ಈ ನಟಿ ತಮ್ಮ ಮ್ಯಾನೇಜರ್ ಜೊತೆ ಸದ್ಯ ರಾಜ್ಯವನ್ನು ತೊರೆದಿರುವುದರಿಂದ ಅವರನ್ನು ಪತ್ತೆ ಹಚ್ಚುವಲ್ಲಿ ನಿರತವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಡ್ರಗ್ಸ್ ಮಾಫಿಯಾದಲ್ಲಿ ಸ್ಯಾಂಡಲ್ವುಡ್ ನ ಕೆಲ ನಟ-ನಟಿಯರು ಸಕ್ರೀಯರಾಗಿದ್ದಾರೆ ಎಂದು ಎನ್ಸಿಬಿ ಸ್ಫೋಟಕ ಮಾಹಿತಿ ಹೊರಹಾಕಿದ ಬೆನ್ನಲ್ಲೇ ಸಿಸಿಬಿ ತನಿಖೆಗಿಳಿದಿತ್ತು. ಇದರ ಬೆನ್ನಲ್ಲೇ ನಟ, ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕನ್ನಡದ ಕೆಲ ನಟ-ನಟಿಯರು ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com