ಡ್ರಗ್ಸ್ ಮಾಫಿಯಾದಲ್ಲಿ ಸ್ಯಾಂಡಲ್ವುಡ್: ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೋಟಿಸ್!

ಸ್ಯಾಂಡಲ್ವುಡ್ ನ ಕೆಲ ನಟ-ನಟಿಯರು ಡ್ರಗ್ಸ್ ಧಂದೆಯಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳ ಬೆನ್ನಲ್ಲೇ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. 
ರಾಗಿಣಿ ದ್ವಿವೇದಿ
ರಾಗಿಣಿ ದ್ವಿವೇದಿ

ಬೆಂಗಳೂರು: ಸ್ಯಾಂಡಲ್ವುಡ್ ನ ಕೆಲ ನಟ-ನಟಿಯರು ಡ್ರಗ್ಸ್ ಧಂದೆಯಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳ ಬೆನ್ನಲ್ಲೇ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. 

ರಾಗಿಣಿ ದ್ವಿವೇದಿ ಮಾಜಿ ಗೆಳೆಯ ಜಯನಗರದ ಆರ್ ಟಿಒ ಅಧಿಕಾರಿ ರವಿಶಂಕರ್ ರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಇದೇ ವೇಳೆ ನಾಳೆ 10ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೂ ಸಿಸಿಬಿ ನೋಟಿಸ್ ನೀಡಿದೆ. 

ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. 

ರಾಗಿಣಿ ಗೆಳೆಯರಾದ ಉದ್ಯಮಿ ಶಿವಪ್ರಕಾಶ್ ಚಿಪ್ಪಿ ಹಾಗೂ ಆರ್ ಟಿಒ ಅಧಿಕಾರಿ ರವಿಶಂಕರ್ 2019ರ ಮಾರ್ಚ್ 16ರಂದು ಖಾಸಗಿ ಹೋಟೆಲ್ ರಿಟ್ಜ್ ಕಾಲ್ರ್ ಟನ್ ನಲ್ಲಿ ಬಿಯರ್ ಬಾಟಲಿಯಿಂದ ಪರಸ್ಪರ ಬಡಿದಾಡಿಕೊಂಡಿದ್ದರು. ಅಂದು ಶಿವಪ್ರಕಾಶ್ ಪಾರ್ಟ್ ಮಾಡುತ್ತಿದ್ದರು. ಇದಕ್ಕೆ ರಾಗಿಣಿ ರವಿಶಂಕರ್ ಜೊತೆ ಹೋಗಿದ್ದೆ ಗಲಾಟೆಗೆ ಕಾರಣವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com