' ದಿ ವಿಲನ್' ಬಳಿಕ ಮತ್ತೊಂದು ಚಿತ್ರಕ್ಕೆ ಒಂದಾಗುತ್ತಿದ್ದಾರೆ ಪ್ರೇಮ್-ಕಿಚ್ಚ ಸುದೀಪ್

ನಿರ್ದೇಶಕ ಪ್ರೇಮ್ ಮತ್ತು ಕಿಚ್ಚ ಸುದೀಪ್ ಮತ್ತೊಂದು ಚಿತ್ರದಲ್ಲಿ ಒಂದಾಗುತ್ತಿದ್ದಾರೆ. ಈ ಬಗ್ಗೆ ಸ್ವತಃ ನಿರ್ದೇಶಕ ಪ್ರೇಮ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಘೋಷಿಸಿಕೊಂಡಿದ್ದಾರೆ.
ನಿರ್ದೇಶಕ ಪ್ರೇಮ್ ಮತ್ತು ಕಿಚ್ಚ ಸುದೀಪ್
ನಿರ್ದೇಶಕ ಪ್ರೇಮ್ ಮತ್ತು ಕಿಚ್ಚ ಸುದೀಪ್

'ಬೆಂಗಳೂರು: ನಿರ್ದೇಶಕ ಪ್ರೇಮ್ ಮತ್ತು ಕಿಚ್ಚ ಸುದೀಪ್ ಮತ್ತೊಂದು ಚಿತ್ರದಲ್ಲಿ ಒಂದಾಗುತ್ತಿದ್ದಾರೆ. ಈ ಬಗ್ಗೆ ಸ್ವತಃ ನಿರ್ದೇಶಕ ಪ್ರೇಮ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಘೋಷಿಸಿಕೊಂಡಿದ್ದಾರೆ.

ಪ್ರೀತಿಯಿಂದ ಕಿಚ್ಚ ಸುದೀಪ್ ರನ್ನು ಡಾರ್ಲಿಂಗ್ ಎಂದು ಕರೆಯುವ ಪ್ರೇಮ್, ಅವರೊಂದಿಗೆ ಮತ್ತೊಂದು ಚಿತ್ರ ಮಾಡುತ್ತಿದ್ದೇನೆ. ಇದರಲ್ಲಿ ನೀವು ಕಿಚ್ಚ ಸುದೀಪ್ ಅವರನ್ನು ಈ ಹಿಂದೆ ಎಂದೂ ನೋಡದ ಅವತಾರದಲ್ಲಿ ಕಾಣಲಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ಕಿಚ್ಚ ಸುದೀಪ್ ಮತ್ತು ಪ್ರೇಮ್ ದಿ ವಿಲನ್ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿ ಅದು 2018ರಲ್ಲಿ ಬಿಡುಗಡೆಯಾಗಿತ್ತು. ಶಿವರಾಜ್ ಕುಮಾರ್ ಕೂಡ ಅದರಲ್ಲಿ ನಟಿಸಿದ್ದರು. ಇದೀಗ ಮತ್ತೆ ಕಿಚ್ಚನ ಜೊತೆ ಸಿನೆಮಾ ಮಾಡಲು ಹೊರಟಿದ್ದಾರೆ ಪ್ರೇಮ್. ಚಿತ್ರದ ಹೆಸರೇನು, ಯಾವಾಗ ಶೂಟಿಂಗ್ ಆರಂಭ, ಯಾವ ರೀತಿಯ ಚಿತ್ರ ಎಂಬುದು ಇನ್ನೂ ಬಹಿರಂಗವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com