ಶೀಘ್ರದಲ್ಲೇ ಚಿತ್ರಮಂದಿರಗಳು ತೆರೆಯಲಿವೆ: ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್

ಕೊರೋನಾ ಲಾಕ್ ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ರಾಜ್ಯಾದ್ಯಂತ ಮುಚ್ಚಲಾಗಿದ್ದ ಚಿತ್ರಮಂದಿರಗಳು ಶೀಘ್ರದಲ್ಲೆ ತೆರೆಯುವ ನಿರೀಕ್ಷೆಯಿದೆ.
ಜೈರಾಜ್
ಜೈರಾಜ್

ಬೆಂಗಳೂರು: ಕೊರೋನಾ ಲಾಕ್ ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ರಾಜ್ಯಾದ್ಯಂತ ಮುಚ್ಚಲಾಗಿದ್ದ ಚಿತ್ರಮಂದಿರಗಳು ಶೀಘ್ರದಲ್ಲೆ ತೆರೆಯುವ ನಿರೀಕ್ಷೆಯಿದೆ.

ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿಯೇ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡುವಂತೆ ನಿರ್ಮಾಪಕರು, ಕಲಾವಿದರು ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಬುಧವಾರವೂ ಸಹ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಡನೆ ಚರ್ಚಿಸಿದ್ದರು.

ಈ ಕುರಿತು ಯುಎನ್‍ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್. ಆದಷ್ಟು ಶೀಘ್ರ ಅಥವಾ ಅಕ್ಟೋಬರ್ 1 ರಿಂದ ಚಿತ್ರಮಂದಿರಗಳು ತೆರೆಯುವ ಸಾಧ್ಯತೆಯಿದೆ ಎಂದಿದ್ದಾರೆ.

ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಿದ್ಧಗೊಂಡಿರುವ ಹಲವು ಚಿತ್ರಗಳಿವೆ. ಇದರಲ್ಲಿ ಕೆಲವು ಒಟಿಟಿ ಫೋರಂ ಮೂಲಕ ಬಿಡುಗಡೆಯಾಗಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com