ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಸೇರಿ ಐವರಿಗೆ ನ್ಯಾಯಾಂಗ ಬಂಧನ
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ದಿನಗಳಿಂದ ಸಿಸಿಬಿ ವಶದಲ್ಲಿ ನಟಿ ರಾಗಿಣಿ ದ್ವಿವೇದಿ ಸೇರಿ ಐವರಿಗೆ ಕೋರ್ಟ್ 14 ದಿನ ನ್ಯಾಯಾಂದ ಬಂಧನಕ್ಕೆ ಆದೇಶಿಸಿದೆ.
Published: 14th September 2020 04:55 PM | Last Updated: 14th September 2020 04:55 PM | A+A A-

ಸಿಸಿಬಿ ಪೊಲೀಸರು ನಟಿ ರಾಗಿಣಿಯವರನ್ನು ವಶಕ್ಕೆ ಪಡೆದ ಸಂದರ್ಭದ ಚಿತ್ರ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ದಿನಗಳಿಂದ ಸಿಸಿಬಿ ವಶದಲ್ಲಿ ನಟಿ ರಾಗಿಣಿ ದ್ವಿವೇದಿ ಸೇರಿ ಐವರಿಗೆ ಕೋರ್ಟ್ 14 ದಿನ ನ್ಯಾಯಾಂದ ಬಂಧನಕ್ಕೆ ಆದೇಶಿಸಿದೆ.
ಆರೋಪಿಗಳ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಬ್ಬರು ನಟಿ ಹಾಗೂ ಇತರೆ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಯಿತು.
ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ಬಂಧಿತ ನಟಿ ಸೇರಿದಂತೆ ಐವರಿಗೆ ಸೆಪ್ಟೆಂಬರ್ 27ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈಗ ಸಿಸಿಬಿ ಪೊಲೀಸರು ನಟಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯುತ್ತಿದ್ದಾರೆ. ಇದರೊಂದಿಗೆ ಡ್ರಗ್ ಪ್ರಕರಣದಲ್ಲಿ ಜೈಲು ಸೇರಿದ ಸ್ಯಾಂಡಲ್ ವುಡ್ ನ ಮೊದಲ ನಟಿ ಎಂಬ ಕುಖ್ಯಾತಿಗೆ ರಾಗಿಣಿ ಪಾತ್ರರಾಗಿದ್ದಾರೆ.
ಈ ಮಧ್ಯೆ, ಜಾಮೀನು ಕೋರಿ ನಟಿ ರಾಗಿಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಿಕೆಯಾಗಿದೆ. ಇದೇ ವೇಳೆ ಡ್ರಗ್ ಪೆಡ್ಲರ್ ರಾಹುಲು, ಶಿವಪ್ರಕಾಶ್, ವಿನಯ್ ಕುಮಾರ್, ವೈಭವ್ ಜೈನ್ ಅವರ ಜಾಮೀನು ವಿಚಾರಣೆಯನ್ನೂ ಮುಂದೂಡಲಾಗಿದೆ.